MLC Confidence: ಮೊದಲ‌ ಸುತ್ತಿನಲ್ಲಿಯೇ ಗೆಲ್ಲುವೆ- ಅರುಣ ಶಹಾಪುರ ವಿಶ್ವಾಸ

ವಿಜಯಪುರ: ವಿಧಾನ ಪರಿಷತ್ತಿನ ವಾಯುವ್ಯ ಶಿಕ್ಷಕರ ಮತ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಜೂ. 15 ಬುಧವಾರ ಬೆಳಗಾವಿಯಲ್ಲಿ ಮತ ಎಣಿಕೆ ನಡೆಯಲಿದೆ.

ಈ ಬಾರಿಯೂ ಶಿಕ್ಷಕ ಬಾಂಧವರು ತಮಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದು ಮೊದಲ ಸುತ್ತಿನಲ್ಲಿಯೇ ಆಯ್ಕೆಯಾಗುವುದಾಗಿ ಬಿಜೆಪಿ ಅಭ್ಯರ್ಥಿ ಮತ್ತು ವಿಧಾನ ಪರಿಷತ ಸದಸ್ಯ ಅರುಣ ಶಹಾಪುರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬವಸ ನಾಡು ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ಸಿನವರು ಸಾಕಷ್ಟು ಹಣ ಹಂಚಲು ಪ್ರಯತ್ನಿಸಿದರೂ ಕೂಡ ಮತದಾರರು ದುಡ್ಡಿಗೆ ಆಸೆಪಡದೆ ತಮಗೆ ಬೆಂಬಲ ಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶೈಕ್ಷಣಿಕವಾಗಿ ನಾಲ್ಕು ಜಿಲ್ಲೆಗಳನ್ನು ಒಳಗೊಂಡಿರುವ ಈ ಮತಕ್ಷೇತ್ರದಲ್ಲಿ ಎಲ್ಲ ಕಡೆ ತಮಗೆ ಶೇ.50 ಕ್ಕಿಂತಲೂ ಹೆಚ್ಚು ಮತಗಳು ಬರಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ

ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಎಲ್ಲ ಸಂಸದರು, ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಎಲ್ಲ ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮತದಾರರು ತಮಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ, ಟೊಂಕಕಟ್ಟಿ ನಿಂತು ಚುನಾವಣೆ ಮಾಡಿದ್ದಾರೆ. ಈಗ 21401 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.  ಶೇ. 84.30‌ ರಷ್ಟು ಮತದಾನವಾಗಿದೆ.  ಈಗ ದಾಖಲಾಗಿರುವ ಮತಗಳನ್ನು ಗಮನಿಸಿದರೆ ಅಭ್ಯರ್ಥಿಗೆ ಸುಮಾರು ಸುಮಾರು 10000ಕ್ಕೂ ಹೆಚ್ಚು ಮೊದಲ ಪ್ರಾಶಸ್ತ್ಯದ ಮತಗಳನ್ನು ಗೆಲುವಿಗೆ ನಿಗದಿ ಪಡಿಸಬಹುದು. ಈ ಕೋಟಾವನ್ನು ತಾವು ಮೊದಲ ಸುತ್ತಿನಲ್ಲಿಯೇ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಅರುಣ ಶಹಾಪುರ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರು ಮತ್ತು ಶೈಕ್ಷಣಿಕ ಕ್ಷೇತ್ರದ ಒಳಿತಿಗಾಗಿ ಶ್ರಮಿಸಿದ್ದೇನೆ. ಶಿಕ್ಷಣ ಸಂಸ್ಥೆಗಳು, ಶಿಕ್ಷಕರ ಸಂಘಟನೆಗಳು ಮತ್ತು ಶಿಕ್ಷಕರು ತಮ್ಮೊಂದಿಗೆ ಭಾವನಾತ್ಮಕ ಮತ್ತು ಅವಿನಾಭವ ಸಂಬಂಧ ಹೊಂದಿದ್ದಾರೆ. ಇದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಹ್ಯಾಟ್ರಿಕ್ ಸಾಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿಕ್ಷಕರ ಸಂಘಗಳ ಎಲ್ಲ ಸಂಘಟನೆಗಳು, ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಇದರಿಂದ ಬಹಳ ಅನುಕೂಲವಾಗಿದೆ ಎಂದು ಅವರು ಹೇಳಿದರು.

ತಮಗೆ ಮತ ಚಲಾಯಿಸಿದ ಎಲ್ಲ ಮತದಾರರು ಮತ್ತು ಇದಕ್ಕೆ ಕಾರಣಿಕರ್ತರಾದ ಎಲ್ಲರಿಗೂ ತಾವು ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವುದಾಗಿ ಅರುಣ ಶಹಾಪುರ ಇದೇ ಸಂದರ್ಭದಲ್ಲಿ ತಿಳಿಸಿದರು.
ಜು. 15 ರಂದು ಬುಧವಾರ ಬೆಳಗಾವಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ತ ಅಥವಾ ರಾತ್ರಿ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

Leave a Reply

ಹೊಸ ಪೋಸ್ಟ್‌