Horatti Win: ವಿಪ ಚುನಾವಣೆ- ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು


ಬೆಳಗಾವಿ: ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಮತಕ್ಷೇತ್ರಕ್ಜೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಗೆಲುವಿನ ಬಳಿಕ ಬಸವರಾಜ ಹೊರಟ್ಟಿ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾ ಬಿಸ್ವಾಸ್ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದರು

ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಬಸವರಾಜ ಹೊರಟ್ಟಿ ಅವರು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು 4669 ಮತಗಳ ಭಾರಿ ಅಂತರದಿಂದ ಸೋಲಿಸಿ ವಿಜಯ ಮಾಲೆ ಧರಿಸಿದ್ದಾರೆ.

ಬೆಳಗಾವಿಯಲ್ಲಿ ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು

ಮತ ಎಣಿಕೆ ಮುಗಿದ ಬಳಿಕ ವಿಜಯಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾ ಬಿಸ್ವಾಸ್ ಗೆಲುವಿನ ಪ್ರಮಾಣ ಪತ್ರ ನೀಡಿದರು.

ಮತ ಎಣಿಕೆಯ ಮಾಹಿತಿ ಇಲ್ಲಿದೆ.

ಒಟ್ಟು ಚಲಾವಣೆತಾದ ಮತಗಳ 15583
ಸಿಂಧು ಮತಗಳು- 14360
ಅಸಿಂಧು ಮತಗಳು- 1223 ಮತಗಳು.

ಅಭ್ಯರ್ಥಿಗಳು ಪಡೆದ ಮತಗಳು

ಬಸವರಾಜ ಹೊರಟ್ಟಿ(ಬಿಜೆಪಿ)- 9266

ಬಸವರಾಜ ಗುರಿಕಾರ(ಕಾಂಗ್ರೆಸ್)- 4597

ಶ್ರೀಶೈಲ ಗುಡದಿನ್ನಿ(ಜೆಡಿಎಸ್)- 273

ಈ ಮೂಲಕ ಬಸವರಾಜ ಹೊರಟ್ಟಿ ಸತತವಾಗಿ ಗೆಲ್ಲುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

Leave a Reply

ಹೊಸ ಪೋಸ್ಟ್‌