ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಈಗ ಕಾಂಗ್ರೆಸ್ ಹವಾ ಜೋರಾಗಿದೆ. ಆರು ತಿಂಗಳಲ್ಲಿ ವಿಧಾನ ಪರಿಷತ್ತಿನ ಎರಡು ಸ್ಥಾನ ಗೆದ್ದಿದ್ದೇವೆ. 2023ರಲ್ಲಿ ಜಿಲ್ಲಾದ್ಯಂತ ಕಾಂಗ್ರೆಸ್ ಪಾರುಪತ್ಯ ಇರಲಿದೆ ಎಂದು ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ.
- ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಸೇರಿ ಕೆಲಸ ಮಾಡಿದ್ದಾರೆ. ಒಗ್ಹಟ್ಟಿನ ಫಲವಾಗಿ ಕಳೆದ ಆರು ತಿಂಗಳಲ್ಲಿ ವಿಧಾನ ಪರಿಷತ್ತಿನ ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ಹೇಳಿದರು.
ಈ ಹಿಂದೆ ಚನ್ನರಾಜ ರಟ್ಟಿಹೊಳಿ ಮತ್ತು ಈಗ ನಾನು ಗೆದ್ದಿದ್ದೇವೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗಾಳಿ ಬಿಸುತಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಕಾಂಗ್ರೆಸ್ ಗಾಳಿ ಜೋರಾಗಿ ಬೀಸುತ್ತಿದೆ ಎಂದು ಅವರು ಹೇಳಿದರು.
ತಮ್ಮನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಮೂದಲಿಸಿದರೂ ಉತ್ತರ ಕೊಡಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರೊಯೆ ನೀಡಿದ ಅವರು, ಕಾರಜೋಳ ಅವರಿಗೆ ಎಷ್ಟು ವಯಸ್ಸಾಗಿದೆ ಎಂಬುದನ್ನು ಅವರು ಪ್ರಶ್ನೆ ಮಾಡಿಕೊಳ್ಳಲಿ ಎಂದು ಖಾತವಾಗಿ ಹೇಳಿದರು.
ಎಸ್ ಎಸ್ ಎಲ್ ಸಿ ಫೇಲ್ ಎಂದು ಬಿಜೆಪಿಯವರು ಹೇಳಿದ್ದಕ್ಕೆ ಟಾಂಗ್ ನೀಡಿದ ಅವರು, ನಾನೇನು ಅವರಿಗೆ ಸರ್ಟಿಫಿಕೇಟ್ ಕೊಟ್ಟಿದ್ದೇನಾ ಎಂದು ವಾಗ್ದಾಳಿ ನಡೆಸಿದರು.
ವಿರೋಧಿಗಳು ಅಪಪ್ರಚಾರ ಮಾಡಿದರೂ ಕಾಂಗ್ರೆಸ್ಸಿನವರು ಕೆಲಸ ಮಾಡಿದ್ದೇವೆ. ಇದರ ಫಲವಾಗಿ ಆರು ತಿಂಗಳಲ್ಲಿ ಎರಡು ಎಂ ಎಲ್ ಸಿ ಕ್ಷೇತ್ರಗಳನ್ನು ಗೆದ್ದಿದ್ದೇವೆ. ಪಕ್ಷದ ಹಾಲಿ, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಒಟ್ಟಿಗೆ ಸೇರಿ ಕೆಲಸ ಮಾಡಿದ್ದಾರೆ. 2023 ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ವಿಜಯ ಪತಾಕೆಯನ್ನು ಹಾರೈಸುತ್ತೇವೆ ಎಂದು ಪ್ರಕಾಶ ಹುಕ್ಕೇರಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಉಪಸ್ಥಿತರಿದ್ದರು.