ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯ ಕಚೇರಿ ಉದ್ಘಾಟನೆ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.ಪ
ಕ್ಷದ ರಾಜ್ಯ ಉಸ್ತುವಾರಿ ಹಾಗೂ ರಾಷ್ಟ್ರೀಯ ವಕ್ತಾರ ದಿಲೀಪ್ ಪಾಂಡೆ ಕಚೇರಿ ಉದ್ಘಾಟಿಸಿದರು.
ಬೆಂಗಳೂರಿನ ಕುಮಾರ ಪಾರ್ಕ್ ವೆಸ್ಟ್‌ನಲ್ಲಿ ಆರಂಭವಾದ ಮೂತನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದಿಲೀಪ್ ಪಾಂಡೆ, ಕರ್ನಾಟಕದಲ್ಲಿ ಆಮ್ ಆದ್ಮಿ ಪಾರ್ಟಿಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿರುವುದನ್ನು ಕಾಣುತ್ತಿದ್ದೇವೆ. ದೆಹಲಿ ಮತ್ತು ಪಂಜಾಬ ಮಾದರಿಯಲ್ಲಿ ಕರ್ನಾಟಕದಲ್ಲಿ ಕೂಡ ಭರ್ಜರಿ ಬಹುಮತದೊಂದಿಗೆ ಎಎಪಿ ಅಧಿಕಾರಕ್ಕೆ ಬರಲಿದೆ. ಬಿಬಿಎಂಪಿ ಚುನಾವಣೆಯಿಂದಲೇ ಎಎಪಿಯ ವಿಜಯಯಾತ್ರೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಎಎಪಿ ಸೇರ್ಪಡೆಯ ಜನಾಂದೋಲನವಾಗಲಿದೆ. ಇದಕ್ಕೆ ಈ ನೂತನ ಕಚೇರಿ ಸಹಕಾರಿಯಾಗಲಿದೆ. ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಎಎಪಿಯನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಪರ್ಯಾಯ ರಾಜಕೀಯಕ್ಕೆ ನಾಂದಿ ಹಾಡಬೇಕು. ಭ್ರಷ್ಟ ಹಾಗೂ ನಿಷ್ಕ್ರಿಯ ಪಕ್ಷಗಳನ್ನು ಬದಿಗೊತ್ತಿ, ಸ್ವಚ್ಛ ಹಾಗೂ ಜನಪರ ಆಡಳಿತ ನೀಡುವ ಎಎಪಿಯನ್ನು ಅಧಿಕಾರಕ್ಕೆ ತರಲು ಕೈಜೋಡಿಸಬೇಕು ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ಮುಖಂಡ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ, ಮುಖ್ಯಮಂತ್ರಿ ಚಂದ್ರು ಮತ್ತಿತರ ನಾಯಕರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.