PUC Rank: ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ, ಜಿಲ್ಲೆಗೆ ನಾನಾ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದ ಎಂ. ಬಿ. ಪಾಟೀಲ
ವಿಜಯಪುರ: ವಿಜಯಪುರ, 19: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಿರುವ ಬಿ ಎಲ್ ಡಿ ಇ ಸಂಸ್ಥೆಯ ನಾನಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಎಂ. ಬಿ. ಪಾಟೀಲ ಸನ್ಮಾನಿಸಿ ಗೌರವಿಸಿದರು. ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿದ್ಯಾರ್ಥಿ ಯಶವರ್ಧನ ಶಹಾ ಒಟ್ಟು […]
Modi Siddhu: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಿಂದ ಕೊರೊನಾ ಹರಡಲ್ವಾ? ಎಸ್. ಸಿದ್ಧರಾಮಯ್ಯ ವ್ಯಂಗ್ಯ
ವಿಜಯಪುರ: ಕಾಂಗ್ರೆಸ್‌ನವರು ಸಭೆ ಸಮಾರಂಭ ಮಾಡಿದರೆ ಕೊರೊನಾ ಬರುತ್ತದೆ ಎಂದು ಬಿಜೆಪಿ ಸರ್ಕಾರ ಹೇಳುತ್ತದೆ. ಆದರೆ, ಈಗ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದರಿಂದ ಕೊರೊನಾ ಬರಲ್ವಾ ಎಂದು ವಿಧಾನ ಸಭೆ ಪ್ರತಿಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಗೌರಮ್ಮ ಮುತ್ತತ್ತಿ ಫೌಂಡೆಶನ್ ವತಿಯಿಂದ ಆಯೋಜಿಸಲಾಗಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಆಗಮಿಸಿದ್ದ ಅವರು ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ಸಿನವರು ಸಮಾರಂಭ […]
Father’s Day: ಪ್ರೇರಣಾ ಪಬ್ಲಿಕ್ ಸ್ಕೂಲಿನಲ್ಲಿ ತಂದೆಯ ಪಾದಪೂಜೆ ಮಾಡಿದ ಮಕ್ಕಳು
ವಿಜಯಪುರ: ವಿಶ್ವ ಅಪ್ಪಂದಿರ ದಿನಾಚರಣೆ ಅಂಗವಾಗಿ ಬಸವ ನಾಡು ವಿಜಯಪುರದ ಪ್ರೇರಣಾ ಪಬ್ಲಿಕ್ ಸ್ಕೂಲಿನಲ್ಲಿ ವಿನೂತನ ಕಾರ್ಯಕ್ರಮ ನಡೆಯಿತು. ಗುರುಗಳ, ಮಾತೆ ಪಾದಪೂಜೆ ನಡೆಸುವುದು ಇತ್ತೀಚೆಗೆ ಮಾಮೂಲಾಗಿದೆ. ಆದರೆ, ಈ ಶಾಲೆಯಲ್ಲಿ ಮಕ್ಕಳು ಅಂದರೆ ಇಲ್ಲಿನ ವಿದ್ಯಾರ್ಥಿಗಳು ತಂತಮ್ನ ಅಪ್ಪಂದಿರ ಪಾದಪೂಜೆ ಮಾಡುವ ಮೂಲಕ ಗಮನ ಸೆಳೆದರು. ತಂದೆಯ ಪಾದಗಳನ್ನು ಜಲದಿಂದ ಸ್ವಚ್ಛಗೊಳಿಸಿದ ಮಕ್ಕಳು ನಂತರ ಆ ಪಾದಗಳಿಗೆ ವಿಭೂತಿ ಮತ್ತು ಕುಂಕುಮ ಹಚ್ಚಿ ಪುಷ್ಪ ಸಮರ್ಪಿಸಿ ಪೂಜೆ ಮಾಡುವ ಮೂಲಕ ಧನ್ಯತೆ ತೋರಿದರು. ಮಕ್ಕಳು […]
MLC Sunilgouda: ಗ್ರಾ. ಪಂ. ಸದಸ್ಯರಿಗೆ ಸಿಹಿ ಸುದ್ದಿ ಸಿಎಂ ಹೇಳಿಕೆ- ನನ್ನ ಹೋರಾಟ ಫಲ ನೀಡುತ್ತಿದೆ- ಸುನೀಲಗೌಡ ಪಾಟೀಲ
ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಳ ಕುರಿತು ನಡೆಸುತ್ತಿರುವ ಹೋರಾಟಕ್ಕೆ ಈಗ ಫಲ ಸಿಗುತ್ತಿದೆ. ಗ್ರಾ. ಪಂ. ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಮೊದಲು ಧ್ವನಿ ಎತ್ತಿರುವ ನಾನು ಈ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟ ಸರಕಾರಕ್ಕೂ ಮನವರಿಕೆಯಾಗಿದೆ. ನಮ್ಮ ಬೇಡಿಕೆಯ ಫಲಶ್ರುತಿಗೆ ಎಂಬಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಶೀಘ್ರದಲ್ಲಿ ಸಿಹಿ ಸುದ್ದಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ಎಂದು ವಿಧಾನ ಪರಿಷತ ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ […]
Mathruvandana Scheme: ಮಾತೃವಂದನಾ ಯೋಜನೆ ಸಮರ್ಪಕ ಅನುಷ್ಠಾನವಾಗಲಿ- ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ
ವಿಜಯಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು. ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಯೊಜನೆಗಳ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲನೇ ಹೆರಿಗೆಗೆ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ರೂ. 5000 ನೀಡಲಾಗುತ್ತದೆ. ಆದ್ದರಿಂದ ಅರ್ಹ […]
Times Rank: ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 41ನೇ ಸ್ಥಾನ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜು ದೆಹಲಿಯ ಟೈಮ್ಸ್ ಎಂಜಿನಿಯರಿಂಗ್ ಪತ್ರಿಕೆ ನಡೆಸಿದ 2022ನೇ ವರ್ಷದ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜುಗಳ ಸಮೀಕ್ಷೆಯಲ್ಲಿ ಭಾರತದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 41ನೇ ಹಾಗೂ ಕರ್ನಾಟಕದಲ್ಲಿ 6ನೇ ಸ್ಥಾನವನ್ನು ಪಡೆದಿದೆ ಎಂದು ಪ್ರಾಚಾರ್ಯ ಡಾ. ವಿ. ಜಿ. ಸಂಗಮ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿವರ್ಷ ಟೈಮ್ಸ್ ಎಂಜಿನಿಯರಿಂಗ್ ಪತ್ರಿಕೆ ನಡೆಸುವ ಸಮೀಕ್ಷೆಯಲ್ಲಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿರುವ ವಿದ್ಯಾರ್ಥಿಗಳ ಪ್ರವೇಶಾತಿ, […]