MLC Sunilgouda: ಗ್ರಾ. ಪಂ. ಸದಸ್ಯರಿಗೆ ಸಿಹಿ ಸುದ್ದಿ ಸಿಎಂ‌‌ ಹೇಳಿಕೆ- ನನ್ನ ಹೋರಾಟ ಫಲ ನೀಡುತ್ತಿದೆ- ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಳ ಕುರಿತು ನಡೆಸುತ್ತಿರುವ ಹೋರಾಟಕ್ಕೆ ಈಗ ಫಲ ಸಿಗುತ್ತಿದೆ. ಗ್ರಾ. ಪಂ. ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಮೊದಲು ಧ್ವನಿ ಎತ್ತಿರುವ ನಾನು ಈ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟ ಸರಕಾರಕ್ಕೂ ಮನವರಿಕೆಯಾಗಿದೆ. ನಮ್ಮ ಬೇಡಿಕೆಯ ಫಲಶ್ರುತಿಗೆ ಎಂಬಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಶೀಘ್ರದಲ್ಲಿ ಸಿಹಿ ಸುದ್ದಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ಎಂದು ವಿಧಾನ ಪರಿಷತ ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಸುನೀಲಗೌಡ ಪಾಟೀಲ ಹೇಳಿದ್ದಾರೆ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಐದು ಬಾರಿ ವಿಧಾನ ಪರಿಷತ ಅಧಿವೇಶನದಲ್ಲಿ ಸುದೀರ್ಘವಾಗಿ ಮಾತನಾಡಿ ಸರಕಾರದ ಗಮನ ಸೆಳೆದಿದ್ದೇನೆ. ಈಗ ಸಿಗುತ್ತಿರುವ ಗೌರವ ಧನ, ಗ್ರಾಮ ಪಂಚಾಯಿತಿ ಸದಸ್ಯರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಡುವ ಮೂಲಕ ಸದನದ ಒಳಗೆ ಮತ್ತು ಹೊರಗೆ ಧ್ವನಿ ಎತ್ತಿದ್ದೇನೆ. ಅಲ್ಲದೇ, ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಗ್ರಾ. ಪಂ. ಸದಸ್ಯರು, ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸರಕಾರಿ ಸೌಲಭ್ಯ ನೀಡುವಂತೆ ಆಗ್ರಹಿಸಿದ್ದೇನೆ.

ಅಲ್ಲದೇ, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವಿಯನ್ನೂ ಮಾಡಿದ್ದೇನೆ. ಗ್ರಾಮೀಣಾಭಿದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಮಾಜಿ ಸಚಿವರಾದ ಕೆ. ಎಸ್. ಈಶ್ವರಪ್ಪ ಅವರಿಗೂ ಈ ಹಿಂದೆ ಮನವಿ ಸಲ್ಲಿಸಿದ್ದೇನೆ. ಸದನದಲ್ಲಿ ನಾನು ಎತ್ತಿರುವ ಧ್ವನಿಗೆ ಎಲ್ಲ ಸದಸ್ಯರೂ ಪಕ್ಷಾತೀತವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಸರಕಾರಕ್ಕೆ ನನ್ನ ಬೇಡಿಕೆ ಮತ್ತು ಹೋರಾಟ ಮನವರಿಕೆಯಾಗಿದ್ದು, ಮುಖ್ಯಮಂತ್ರಿಗಳು ಆದಷ್ಟು ಬೇಗನೆ ಈ ನಿಟ್ಟಿನಲ್ಲಿ ಕಾರ್ಯೋನ್ಮುಖ ಆಗುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ. ಸದಾ ನನ್ನ ಹಿತ ಬಯಸುವ ಗ್ರಾಮ ಪಂಚಾಯಿತಿ ಸದಸ್ಯರ ಪರ ಅವರ ಧ್ವನಿಯಾಗಿ ಕೆಲಸ ಮಾಡಲು ಕಟಿಬದ್ಧನಾಗಿದ್ದೇನೆ ಎಂದು ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌