PM Bommayi: ಪ್ರಧಾನ ಮಂತ್ರಿಗಳಿಂದ ರೂ. 33000 ಕೋ. ವೆಚ್ಚದ ನಾನಾ ಯೋಜಗಳಿಗೆ ಚಾಲನೆ- ಯೋಜನೆಗಳು ಪೂರ್ಣಗೊಂಡ ಬಳಿಕ ರಾಜ್ಯದ ಜಿಡಿಪಿ ಶೇ. 2 ಹೆಚ್ಚಳ- ಸಿಎಂ‌ ಬೊಮ್ಮಾಯಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿರುವ ರೂ. 33 ಸಾವಿರ ಕೋ. ವೆಚ್ಚದ ವಿವಿಧ ಯೋಜನೆಗಳು ಪೂರ್ಣಗೊಂಡಾಗ ಕರ್ನಾಕಟದ ಜಿಡಿಪಿ ಶೇ 2 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ.‌ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ- ಪೆನುಕೊಂಡ ಜೋಡಿ ರೈಲು ಮಾರ್ಗ ಉದ್ಘಾಟನೆ […]

Agnipath Shivanand Patil: ಉದ್ಯೋಗ ಅಭದ್ರತೆ ಕಾರಣ ಯುವಕರು ವಿರೋಧಿಸುತ್ತಿದ್ದಾರೆ- ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಅಗ್ನಿಪಥ ಯೋಜನೆ ವಿಚಾರದಲ್ಲಿ ಯುವಕರಿಗೆ ಅಭದ್ರತೆ ಕಾಡುತ್ತಿದೆ.  ಈ ಹೀಗಾಗಿ ಯುವಕರು ಆ ರೀತಿ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಗ್ನಿಪಥ ಯೋಜನೆ ಜಾರಿ ವಿಚಾರದಲ್ಲಿ ಸ್ವಲ್ಪ ಆತುರತೆಯಾಗಿದೆ.  ಕಳೆದ ಏಳೆಂಟು ವರ್ಷಗಳಲ್ಲಿ ಯುವಕರಿಗೆ ನಿರುದ್ಯೋಗ ಸಮಸ್ಯೆ ಕಳೆದ ಹೆಚ್ಚಾಗಿದೆ.  ಈ ಬಗ್ಗೆ ಸ್ವತಃ ಬಿಜೆಪಿ ಸಂಸದ ವರುಣ ಗಾಂಧಿ ಅವರಂಥ ನಾಯಕರೇ ಹೇಳಿದ್ದಾರೆ.  ಕೇಂದ್ರದಲ್ಲಿ 60 […]

PM Arrived: ಬೆಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದಾರೆ. ಭಾರತೀಯ ವಾಯುಸೇನೆ ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮತ್ತು ಇತರ ಅಧಿಕಾರಿಗಳು ಸ್ವಾಗತಿಸಿದರು.   ವಿಮಾನದಿಂದ ಕೆಳಗಿಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಲು ಹೊದಿಸಿ ಸ್ವಾಗತಿಸಿದರು. ಅಲ್ಲದೇ, ಪ್ರಧಾನಿ ಅವರಿಗೆ ಪುಸ್ತಕವೊಂದನ್ನು ನೀಡಿದರು.

Yoga DC: ಯೋಗ ದಿನಾಚರಣೆ: ಗೋಲ್‌ಗುಂಬಜ್ ಆವರಣದಲ್ಲಿ ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದ ವಿಜಯಪುರ ಡಿಸಿ

ವಿಜಯಪುರ: ಜಿಲ್ಲೆಯಲ್ಲಿ ಅಂತಾರಾಷ್ಟೀಯ ಯೋಗ ದಿನಾಚರಣೆಯ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಖುದ್ದಾಗಿ ಐತಿಹಾಸಿಕ ಗೋಳಗುಮ್ಮಟ ಆವರಣಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಪಟುಗಳಿಗೆ ಸ್ಥಳವಕಾಶ, ಜನಪ್ರತಿನಿಧಿಗಳು ಮತ್ತು ಗಣ್ಯರಿಗೆ ಆಸನದ ವ್ಯವಸ್ಥೆಗೆ ನಿಗದಿ ಪಡಿಸಿದ ಸ್ಥಳ ವೀಕ್ಷಣೆ ಮಾಡಿದ ಅವರು, ಪ್ರವೇಶ ದ್ವಾರಗಳ ಬಗ್ಗೆ ಮಾಹಿತಿ ಪಡೆದರು. ಕುಡಿಯುವ ನೀರು ಮತ್ತು ಇನ್ನೀತರ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಗಮನಿಸಿದರು. ರಿಹರ್ಷಲ್ ಕೂಡ […]