Yoga Day: ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಆಡಳಿತಾಧಿಕಾರಿ ವೆಂಕಟೇಶ, ವಿಶ್ವಾದ್ಯಂತ ಇಂದು ಯೋಗ ದಿನ ಆಚರಿಸಲಾಗುತ್ತಿದೆ.  ಭಾರತದಲ್ಲಿ ಪುರಾತನ ಕಾಲದಿಂದಲೂ ಯೋಗ ಮಾಡಲಾಗುತ್ತಿದೆ.  ಜೀವನದಲ್ಲಿ ಗುರಿ ಸಾಧಿಸಲು ಯೋಗ ಪ್ರಮುಖ ಸಾಧನವಾಗಿದೆ.  ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಸಲು ಸಾಧ್ಯ.  ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಲಾಯಿತು

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಎಸ್. ಎಸ್. ನಾಡಗೌಡ ಕೂಡ ಯೋಗದ ಮಹತ್ವ ಕುರಿತು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಚಂದ್ರು ಚೌಧರಿ, ಪ್ರಾಚಾರ್ಯರಾದ ವಿಜಯಲಕ್ಷ್ಮಿ ಪಟ್ಟೆದ, ಶಿಕ್ಷಕರು, ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌