Yatnal Visit: ವಿಜಯಪುರ ನಗರದ ಆಶ್ರಮ ರಸ್ತೆಯ ಬಳಿ ಕಲ್ಲಿನ ಖಣಿ ರಸ್ತೆ ಅಗಲೀಕರಣ ಸ್ಥಳ ವೀಕ್ಷಿಸಿದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಜೂನ್ 28ರಂದು ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯೊಂದರ ಸ್ಥಳ ವೀಕ್ಷಣೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು, ಲೋಕೋಪಯೋಗಿ ಇಲಾಖೆಯಿಂದ 450 ಲಕ್ಷ ರೂ.ಮಂಜೂರಿಯಾದ, ಆದರ್ಶ ನಗರದ ಶ್ರೀ ಸಿದ್ದೇಶ್ವರ ಬ್ಯಾಂಕ್ ಎದುರಿನ ಕಲ್ಲಿನ ಖಣಿ ತುಂಬಿಸಿ ರಸ್ತೆ ಅಗಲೀಕರಣ ಮಾಡುವ ಕಾಮಗಾರಿಗೆ ಈಗಾಗಲೇ ಟೆಂಡರ್ ಕರೆದಿದ್ದು, ಸದರಿ ಕಾಮಗಾರಿ ಕುರಿತು ಮತ್ತು ಅಲ್ಲಿಂದ ಹೊಸ ಸಂಚಾರ ಮಾರ್ಗ ರಚನೆ ಕುರಿತು ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ […]

DC Grievances: ಮುದ್ದೇಬಿಹಾಳ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಪ್ರತಿ ಮಂಗಳವಾರ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ’ ಕಾರ್ಯಕ್ರಮದ ಪೂರ್ವನಿಯೋಜಿತ ವೇಳಾಪಟ್ಟಿಯಂತೆ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಜೂನ್ 28ರಂದು ಮುದ್ದೇಬಿಹಾಳ ತಾಲೂಕು ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದರು. ನಿಗದಿ ಪಡಿಸಿದ ಅವಧಿಗಿಂತ ಗಂಟೆಗೂ ಹೆಚ್ಚಿನ ಸಮಯ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿದ್ದು, ತಾಲೂಕಿನ ಸಾರ್ವನಿಕರ ಕುಂದುಕೊರತೆಗಳನ್ನು ಆಲಿಸಿದರು. ಈ ವೇಳೆ ಒಟ್ಟು 23 ಕುಂದುಕೊರತೆ ಅರ್ಜಿಗಳು ಸ್ವೀಕೃತವಾದವು. ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅರ್ಜಿಗಳ ವಿಲೇವಾರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಮುದ್ದೇಬಿಹಾಳ ತಾಲೂಕಿನಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು […]

Dress Code: ಸರಕಾರಿ ಡಿಗ್ರಿ ಕಾಲೇಜಿನಲ್ಲಿ ಸಮವಸ್ತ್ರ ಜಾರಿ ನಿರ್ಣಯಕ್ಕೆ ಶಾಸಕರ ಅಧ್ಯಕ್ಷತೆಯ ಸಿಡಿಸಿ ಸಮಿತಿ ಅನುಮತಿ

ವಿಜಯಪುರ:  ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಆಗಿರುವ ವಿಜಯಪುರ ನಗರ ಶಾಸಕರಾಗಿರುವ ಬಸನಗೌಡ ಆರ್.ಪಾಟೀಲ (ಯತ್ನಾಳ) ಇವರ ಅಧ್ಯಕ್ಷತೆಯಲ್ಲಿ ಜೂನ್ 28ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಕಾಲೇಜಿಗೆ ಬೇಕಾದ ಕೆಲವು ಅತ್ಯವಶ್ಯಕವಾದ ಸೌಕರ್ಯಗಳನ್ನು ಒದಗಿಸಿಕೊಡಲು ಭರವಸೆ ನೀಡಿದರು. ಸಭೆಯಲ್ಲಿ, ವಿದ್ಯಾರ್ಥಿಗಳ ಬೇಡಿಕೆಯಂತೆ ಸಮವಸ್ತ್ರ ಜಾರಿ ಬಗ್ಗೆ ಚರ್ಚೆ ನಡೆಯಿತು. ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಶಿಸ್ತು ಕಾಪಾಡಲು ಸಮವಸ್ತ್ರ ಅವಶ್ಯಕವಾಗಿರುವುದರಿಂದ ಹಾಗೂ ವಿದ್ಯಾರ್ಥಿಗಳ ಬೇಡಿಕೆಯೂ ಇರುವುದರಿಂದ ಮತ್ತು […]

Yatnal Inaguration: ಶಾಸಕ ಯತ್ನಾಳ ಅವರಿಂದ ತರಗತಿ ಕೊಠಡಿ, ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ವಿಜಯಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ 7 ಹೆಚ್ಚುವರಿ ತರಗತಿ ಕೊಠಡಿಗಳ ಹಾಗೂ ಕಂಪ್ಯೂಟರ್ ಲ್ಯಾಬ್‌ನ್ನು ವಿಜಯಪುರ ನಗರ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಸನಗೌಡ ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು. ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಇವರ ಆಶ್ರಯದಲ್ಲಿ ಜೂನ್ 28ರಂದು ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಕಾಲೇಜಿನ ಆವರಣದಲ್ಲಿ ಹೈ-ಮಾಸ್ಕ್ ವಿದ್ಯುತ್ ದೀಪ್, ಹೈಟೆಕ್ ಶೌಚಾಲಯ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಡೆಸ್ಕ್ಗಳ ವ್ಯವಸ್ಥೆ, […]

Ayushman Bharat: ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಜಿಲ್ಲಾ ಕುಂದು ಕೊರತೆ ನಿವಾರಣೆ ಸಭೆ

ವಿಜಯಪುರ: ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜೂನ್ 27ರಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ಟೀಯ ಸ್ವಾಸ್ಥ್ಯ ಭಿಮಾ ಯೋಜನೆಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ ಎಂಬ ಮಾಹಿತಿಯನ್ನು ನೀಡಬೇಕು. ಎಪಿಎಲ್ ಕಾರ್ಡುದಾರರು ಅಥವಾ ಬಿಪಿಎಲ್ […]

GP Building Inauguration: ತೆನ್ನಿಹಳ್ಳಿ ಗ್ರಾ. ಪಂ. ಕಟ್ಟಡ ಉದ್ಘಾಟಿಸಿದ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಪಂಚಾಯಿತಿ ರಾಜ್ ವ್ಯವಸ್ಥೆಯು ಪ್ರಜಾಪ್ರಭುತ್ವ ತಳಹದಿ ಮೇಲೆ ನಿಂತಿದೆ. ಗ್ರಾಮಗಳ ಅಭಿವೃದ್ಧಿ ದೆಸೆಯಲ್ಲಿ ನಡೆಸುವ ಗ್ರಾಮ ಸಭೆಗಳಲ್ಲಿ ಪ್ರತಿ ನಾಗರಿಕನು ಭಾಗವಹಿಸುವಂತೆ ಮಾಡಬೇಕು. ಅಂದಾಗ ಮಾತ್ರ ಗ್ರಾಮಸ್ಥರ ಆಶಯಗಳ ಅನುಷ್ಠಾನ ಸಾಧ್ಯವಾಗಲಿದೆ ಎಂದು ಶಾಸಕರಾದ ಯಶವಂತರಾಯಗೌಡ ಪಾಟೀಲ ಹೇಳಿದರು. 2021-22ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಿಸಿದ ಇಂಡಿ ತಾಲೂಕಿನ ತೆನ್ನಿಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಾರ್ಯಾಲಯ ಮತ್ತು ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಜೂನ್ 27ರಂದು ಉದ್ಘಾಟಿಸಿ ಅವರು ಮಾತನಾಡಿದರು. ‘ಗ್ರಾಮ […]

National Campaign: ರಾಷ್ಟ್ರೀಯ ನೇತ್ರ ಜ್ಯೋತಿ ಅಭಿಯಾನ: ನೇತ್ರ ತಪಾಸಣೆ, ಮೋತಿ ಬಿಂದು ಶಸ್ತ್ರ ಚಿಕಿತ್ಸೆಗೆ ಡಿಸಿ ಸಲಹೆ

ವಿಜಯಪುರ: ರಾಷ್ಟೀಯ ನೇತ್ರ ಜ್ಯೋತಿ ಅಭಿಯಾನ ಅಂಗವಾಗಿ ಜಿಲ್ಲೆಯ ಒಂಬತ್ತು ಆಸ್ಪತ್ರೆಗಳಲ್ಲಿ ಉಚಿತವಾಗಿ ನೇತ್ರ ತಪಾಸಣೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಹೇಳಿದರು. ರಾಷ್ಟೀಯ ನೇತ್ರ ಜ್ಯೋತಿ ಅಭಿಯಾನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂನ್ 27ರ ಸಂಜೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಈ ಅಭಿಯಾನವು ಜಿಲ್ಲೆಯಲ್ಲಿ ಸರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಸಹಾಯ ಕೂಡ ಪಡೆಯಬೇಕು. ಅವರಿಂದ ಮನೆಮನೆ ಭೇಟಿ ನಡೆಸಿ […]

40% Commission Report: 40% ಕಮಿಷನ್ ಸರಕಾರ ಆರೋಪದ ಕುರಿತು ಪ್ರಧಾನಿ ಕಚೇರಿ ಬಹಳ ಬೇಗ ವರದಿ ಕೇಳಿದೆ- ಎಂ. ಬಿ. ಪಾಟೀಲ‌ ವ್ಯಂಗ್ಯ

ವಿಜಯಪುರ: ರಾಜ್ಯ ಬಿಜೆಪಿ ಸರಕಾರ 40% ಸರಕಾರ ಎಂದು ಪ್ರತಿಪಕ್ಷಗಳ ಆರೋಪ ವಿಚಾರವಾಗಿ ಪ್ರಧಾನಿ ಕಚೇರಿ ಬಹಳ ಬೇಗ ವರದಿ ಕೇಳಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ವ್ಯಂಗ್ಯವಾಡಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್. ಟಿ-1 ರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯ ಸರಕಾರ 40% ಕಮಿಷನ್ ಸತಕಾರ ಎಂದು ಪ್ರತಿಪಕ್ಷಗಳ ಆರೋಪ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ವರದಿ ಕೇಳಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ತೀಕ್ಷ್ಣವಾಗಿ […]

Mannettina Amavasye: ಬಸವ ನಾಡಿನಲ್ಲಿ ಗಮನ ಸೆಳೆದ ಮಣ್ಣೆತ್ತಿನ ಅಮವಾಸ್ಯೆ- ಮಣ್ಣಿನ ಮಕ್ಕಳ ಮನೆಯ ಅಲಂಕರಿಸಿದ ಮಣ್ಣೆತ್ತಿನ ಮೂರ್ತಿಗಳು

ವಿಜಯಪುರ: ಉತ್ತರ ಕರ್ನಾಟಕ ಎಂದರೆ ಸಾಕು ತರಹೇವಾರಿ ಸಂಪ್ರದಾಯಗಳು ಮತ್ತು ಆಚರಣೆಗೆ ಹೆಸರುವಾಸಿ. ಅದರಲ್ಲೂ ರೈತರು ತಮ್ಮ ಜೀವನದ ಅವಿಭಾಜ್ಯ ಅಂಗಗಳಾಗಿರುವ ಹಾಗೂ ಜೀವನದಲ್ಲಿ ಹಾಸು ಹೊಕ್ಕಾಗಿರುವ ಕೃಷಿಗೆ ಸಂಬಂಧಿಸಿದ ಸಲಕರಣೆಗಳು, ಸಾಕು ಪ್ರಾಣಿಗಳ ಬಗ್ಗೆ ಹೊಂದಿರುವ ಅನೂನ್ಯತೆ ಅಪರಿಮಿತವಾಗಿರುತ್ತದೆ‌.  ಅನ್ನದಾತರು ಕೈಗೊಳ್ಳುವ ಪ್ರಮುಖ ಕೃಷಿ ಚಟುವಟಿಕೆಗಳಿಗೆ ಎತ್ತುಗಳೇ ಆಧಾರ. ‌ತಮ್ಮ‌ ಬದುಕಿಗೆ ಆಸರೆಯಾಗುವ ಎತ್ತುಗಳನ್ನು ಪ್ರೀತಿಯಿಂದ ಪೂಜಿಸಿ ಸಂಭ್ರಮಿಸುವ ಹಬ್ಬವೇ ಮಣ್ಣೆತ್ತಿನ ಅಮವಾಸ್ಯೆ. ಇಂಥ ವಿಶಿಷ್ಠ ದ ಹಬ್ಬದ ಅಂಗವಾಗಿ ಮಣ್ಣಿನ ಎತ್ತುಗಳ ಮಾರಾಟ ಮತ್ತು […]