ADC Instructed: ನಿಯಮಾನುಸಾರ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಸಿ- ಅಪರ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟುಗಳ ಉಪಯೋಜನೆ ಹಾಗೂ ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ ಅಧಿನಿಯಮ-2013ರಡಿ ರಚಿಸಲಾದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯು ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಎಸ್ಸಿ ಮತ್ತು ಎಸ್ಟಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ನಿಗದಿ ಪಡಿಸಿದ ಅನುದಾನ ಬಳಸಲು ನಿರ್ಲಕ್ಷ್ಯ ತೋರಿ ಲ್ಯಾಪ್ಸ್ ಗೊಳಿಸಿದಲ್ಲಿ ಅಂಥ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನನಡಿ ಅವಕಾಶವಿದೆ. ಸರಕಾರದ ನಿಯಮಾನುಸಾರ ಅನುದಾನವನ್ನು ಬಳಸಿ, ಈ ಅನುದಾನಕ್ಕೆ ಬೇರೆ ಉದ್ದೇಶಕ್ಕೆ ಬಳಸದೇ ಸರ್ಕಾರದ ಆದೇಶದ ಪ್ರಕಾರ ಹಾಗೂ ಮಾರ್ಗಸೂಚಿಯ ಪ್ರಕಾರ ಅನುದಾನ ಬಳಸಲು ತಿಳಿಸಿದರು.

ಎಸ್ಸಿ‌, ಎಸ್ಪಿ ಮತ್ತು ಟಿಎಸ್ಪಿ ಕಾಯ್ದೆಯ ಪ್ರಕಾರ ಅರ್ಹ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ಅನುದಾನವನ್ನು ತಲುಪಿಸಿ, ನಿಗದಿತ ಸಮಯದೊಳಗಾಗಿ ಅನುದಾನ ಬಳಸಬೇಕು. ಇಲ್ಲದಿದ್ದರೆ ಎಸ್‌ಸಿ.ಎಸ್‌ಟಿ ಕಾಯ್ದೆ ಪ್ರಕಾರ ಅದು ಅಪರಾಧವಾಗುತ್ತದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಉಪಾಧಿಕ್ಷಕರಾದ ಲಕ್ಷ್ಮಿ ನಾರಾಯಣ, ತೋಟಗಾರಿಕೆ, ಪಶುಪಾಲನೆ, ಕೃಷಿ, ಆಹಾರ, ಆರೋಗ್ಯ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಪರಿಶಿಷ್ಟ ಜಾತಿ ಉಪಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿಯ ಸಂಚಾಲಕರು ಆಗಿರುವ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸ್ವಾಗತಿಸಿದರು.

Leave a Reply

ಹೊಸ ಪೋಸ್ಟ್‌