ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ನಗರದ ಕರ್ನಾಟಕ ರೂರಲ್ ಇನಫ್ರಾಸ್ಟ್ರಕ್ಚರ್ ಡೆವಲಪಮೆಂಟ್ ಲಿಮಿಟೆಡ್ ವಿಭಾಗದ ಕಚೇರಿಗೆ ಭೇಟಿ ನೀಡಿದರು.
ಕೆ ಆರ್ ಐ ಡಿ ಎಲ್ ವಿಭಾಗ ಹಾಗೂ ಉಪ ವಿಭಾಗಗಳ ಕಚೇರಿಗಳ ಸ್ಥಿತಿಗತಿ ಪರಿಶೀಲಿಸಿದ ಅವರು, ಬಳಿಕ ಕೆ ಆರ್ ಐ ಡಿ ಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜಿಲ್ಲಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಯೋಜನೆಗಳಾದ ಗ್ರಾಮ ವಿಕಾಸ, ಮುಖ್ಯಮಂತ್ರಿ ಗ್ರಾಮ ವಿಕಾಸ, ಮುಖ್ಯಮಂತ್ರಿ ಮಾದರಿ ಗ್ರಾಮ ವಿಕಾಸ, ಅಮೃತ ಯೋಜನೆಯಡಿ ಅಂಗನವಾಡಿ ಕಟ್ಟಡಗಳು, ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡಗಳು ಹಾಗೂ ರಸ್ತೆ ಅಭಿವೃದ್ಧಿ ಯೋಜನೆಯಡಿಲ್ಲಿನ ಕಾಮಗಾರಿಗಳ ಕುರಿತು ಅವರು ಸುದೀರ್ಘವಾಗಿ ಚರ್ಚಿಸಿದರು. ಅಲ್ಲದೇ, ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಲು ಸೂಚಿಸಿದರು. ಕಾಮಗಾರಿಗಳ ಬಗ್ಗೆ ಮತ್ತು ಅನುದಾನ ಬಿಡುಗಡೆಯ ಬಗ್ಗೆ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಇತ್ಯರ್ಥಪಡಿಸಲು ರಾಹುಲ ಶಿಂಧೆ ಸೂಚಿಸಿದರು.
ವಿಭಾಗ ಕಚೇರಿಯಲ್ಲಿ ಗುಣಮಟ್ಟ ನಿಯಂತ್ರಣ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಮೃತ ಯೋಜನೆಯಡಿ ಸರಬರಾಜು ಮಾಡಲು ತಯಾರಿಸಿದ ಪೀಠೋಪಕರಣಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕೆ ಆರ್ ಐ ಡಿ ಎಲ್ ಬೆಳಗಾವಿಯ ಮುಖ್ಯ ಅಭಿಯಂತರ ವೇಣುಗೋಪಾಲ, ಕೆಆರ್‌ಐಡಿಎಲ್‌ನ ಕಾರ್ಯಪಾಲಕ ಅಭಿಯಂತರರಾದ ತಿಮ್ಮರಾಜಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎಂ. ಸಿ.
ಬಸವನ ಬಾಗೇವಾಡಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜಶೇಖರ ಮತ್ತು ಇಂಡಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಉಪಸ್ಥಿತರಿದ್ದರು.