ಬೆಂಗಳೂರು: ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್‍ನ ಸರಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎಷ್ಟೇ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ. ಹಿಂದಿನ ಸರಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆದಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.