MLC Bhumipuje: ತಿಕೋಟಾ, ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ನೀರು ಸರಬರಾಜು ಯೋಜನೆಗೆ ಸುನೀಲಗೌಡ ಪಾಟೀಲ ಭೂಮಿ ಪೂಜೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಅವರು ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ಜೆ.ಜೆ.ಎಂ. ಯೋಜನೆಯಡಿ ಮನೆ– ಮನೆಗೆ ನಳದ ಮೂಲಕ ನೀರು ಸರಬರಾಜು ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ತಿಕೋಟಾ ತಾಲೂಕಿನ ಅತಾಲಟ್ಟಿ ಎಲ್.ಟಿ. ರೂ. 67.75ಲಕ್ಷ ವೆಚ್ಚದಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ನಾನು ರಾಠೋಡ, […]

PSI Scam: ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಿಎಸ್ ಐ ನೇಮಕಾತಿ ಪ್ರಕರಣ ಗಮನಕ್ಕೆ ಬಂದ ತಕ್ಷಣವೇ ಪ್ರಾಥಮಿಕ ತನಿಖೆ ಕೈಗೊಂಡು ಅದನ್ನು ಕೂಡಲೇ ಸಿಐಡಿ ತನಿಖೆಗೆ ವಹಿಸಲಾಯಿತು. ಅತ್ಯಂತ ಪ್ರಾಮಾಣಿಕವಾಗಿ, ದಕ್ಷತೆಯಿಂದ ಗೃಹ ಸಚಿವರು ಕೆಲಸ ಮಾಡಿದ್ದಾರೆ. ಅವರ ಪ್ರಾಮಾಣಿಕತೆ ಮತ್ತು ದಕ್ಷತೆ ಇರುವುದರಿಂದಲೇ ಪ್ರಕರಣ ಹೊರಬಂದಿದೆ. ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್ಸಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ  ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ಸಿನವರ ಕಾಲದಲ್ಲಿ ಪಿಎಸ್‍ಐ ನೇಮಕಾತಿ ಪರೀಕ್ಷೆಯ […]