ವಿಜಯಪುರ: ಬಬಲೇಶ್ವರ ಮತ್ತು ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಚಾಲನೆ ನೀಡಿದರು.
ಬಬಲೇಶ್ವರ ಪಟ್ಟಣದಲ್ಲಿ ನಿರ್ಮಿತಿ ಕೇಂದ್ರ ರೂ.10 ಲಕ್ಷ ವೆಚ್ಚದಲ್ಲಿ ಸರಕಾರಿ ಹೆಣ್ಣು ಮಕ್ಕಳ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಸುಜಾತಾ ಕಳ್ಳೀಮನಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಜಾತ ಜಂಗಮಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ಮುಖಂಡರಾದ ಬಿ.ಜಿ.ಬಿರಾದಾರ, ಸಿದ್ರಾಯ ಆಡಿನ, ಬಸವರಾಜ ಲೋಕುರಿ, ಮಲ್ಲು ಮರಿಯಾನಿ, ಗುರು ಕವಟಗಿ, ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.
ದೇವರಗೆಣ್ಣೂರ ಗ್ರಾಮದಲ್ಲಿ ಕೆ.ಆರ್.ಐಡಿಯಲ್ ವತಿಯಿಂದ ನಿರ್ಮಿಸಲಾಗುತ್ತಿರುವ ರೂ. 25 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಮತ್ತು ಪಿಆರ್‍ಇಡಿ ವತಿಯಿಂದ ಹದಿನೈದನೆಯ ಹಣಕಾಸು ಯೋಜನೆಯಡಿ ರೂ. 4.60 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿ ಹಾಗೂ ಸ್ಮಶಾನ ಅಭಿವೃದ್ಧಿ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದರು.
ಇದೇ ವೇಳೆ ಜೆಜೆಎಂ ಯೋಜನೆಯಡಿ ಮನೆಮನೆಗೆ ನಳದ ಮೂಲಕ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ಸುನೀಲಗೌಡ ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕೆ.ಎಚ್.ಮುಂಬಾರಡ್ಡಿ, ವಿ.ವಿ.ಅರಕೇರಿ, ವಿ.ಎಚ್.ಬಿದರಿ, ಸಂಗಮೇಶ ನಾಯಕ, ಅಶೋಕ ಗುರಡ್ಡಿ, ಮುದಕಪ್ಪ ಬಿರಾದಾರ, ಮಲ್ಲನಗೌಡ ಪಾಟೀಲ ಲಿಂಗದಳ್ಳಿ, ಶ್ರೀಶೈಲ ಸುಳ್ಳದ, ವಾಸು ಗಿರೇಗೋಳ, ಗ್ರಾಮದ ಮುಖಂಡರು ಮತ್ತು ಯುವಕರು ಉಪಸ್ಥಿತರಿದ್ದರು.