MBP Siddheshwar Swamiji: ಎಂ. ಬಿ. ಪಾಟೀಲ ಕೇವಲ ನಾಯಕರಲ್ಲ, ಜಲದನಾಯಕರು- ಸಿದ್ಧೇಶ್ವರ ಸ್ವಾಮೀಜಿ

ವಿಜಯಪುರ: ಬದುಕು ಅಮೂಲ್ಯ.  ದೇಹ ಮನಸ್ಸು ಇದನ್ನು ಸ್ವಚ್ಚವಾಗಿಟ್ಟುಕೊಂಡು ದೇವರಿಗೆ ಸಮರ್ಪಣೆ ಮಾಡುವದರಿಂದ ಜೀವನ ಸಾರ್ಥಕವಾಗಲಿದೆ.  ದಣಿವಿಲ್ಲದೇ ಮಾಡುವ ಕಾರ್ಯವೇ ದಾಸೋಹ ಮತ್ತು ಕಾಯಕಗಳಿಗೆ ಬಸವಣ್ಣನವರು ಮಹತ್ವ ನೀಡಿದ್ದರು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ತಿಕೋಟಾ ಪಟ್ಟಣದಲ್ಲಿ ಗ್ರಾಹಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತಿಕೋಟಾ ಗ್ರಾಮದಲ್ಲಿ ಮೊದಲು ಜನರು ಹೆಚ್ಚು ಕಂಡು ಬರುತ್ತಿರಲಿಲ್ಲ.  ಇಲ್ಲಿ ಹೆಚ್ಚಿನ ಸಂಖ್ಯೆ ಇಲ್ಲ ಎಂದು ಅಂದುಕೊಂಡಿದ್ದೆ.  ಆದರೆ, ಇಂದು ನೋಡಿದರೆ ಎಣಿಕೆಗೆ […]

Highmask Light Foundation: ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಗೆ ಡಾ. ದೇವಾನಂದ ಚವ್ಹಾಣ ಭೂಮಿಪೂಜೆ

ವಿಜಯಪುರ: ನಾಗಠಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಜಯಪುರ ನಗರದ ವಾರ್ಡ್ ನಂ.12ರ ಗಚ್ಚಿನಕಟ್ಟಿ ಕಾಲನಿ ಬಾಳಿ ಪರಿಸಿ ಅಡ್ಡೆ ಹತ್ತಿರ ಹೊಸದಾಗಿ ರೂ. 17.30 ಲಕ್ಷ ರೂ. ವೆಚ್ಚದಲ್ಲಿ 16 ಮೀಟರ್ ಎತ್ತರದ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಗೆ ಹಾಗೂ ವಾರ್ಡ್ ನಂ.12ರ ಅಕ್ಕಿ ಕಾಲೋನಿ ಬಲಮುರಿ ಗಣಪತಿ ದೇವಸ್ಥಾನ ಹತ್ತಿರ ರೂ. 4 ಲಕ್ಷ ರೂ. ವೆಚ್ಚದಲ್ಲಿ 12.50 ಮೀಟರ್ ಎತ್ತರದ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಸುವ ಕಾಮಗಾರಿಗೆ ಜೆಡಿಎಸ್ ಶಾಸಕ ಡಾ. ದೇವಾನಂದ […]

Cold Storage CM: ವಿಜಯಪುರ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ: ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯ ತೊರವಿ ಗ್ರಾಮದ ಬಳಿ ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಕೋಲ್ಡ್ ಸ್ಟೋರೇಜ್ ಸ್ಥಾಪಿಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ವಿವಿಧ ಸೌಲಭ್ಯ ಒದಗಿಸುವ ಕುರಿತು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಚರ್ಚಿಸಿದರು. ವಿಜಯಪುರ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಒಂದು ಲಕ್ಷ ಟನ್ ದ್ರಾಕ್ಷಿ ಉತ್ಪಾದನೆಯಾಗುತ್ತಿದ್ದು, ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ಅಗತ್ಯ […]

Retd Govt Employees CM: ಸರಕಾರಿ ನಿವೃತ್ತ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ- ಸಿಎಂ‌ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸರಕಾರಿ ನಿವೃತ್ತ ನೌಕರರಿಗೆ ಆರೋಗ್ಯ ಯೋಜನೆಯನ್ನು ವಿಸ್ತರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಸರಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರಿ‌ ನಿವೃತ್ತ ನೌಕರರಿಗಾಗಿ ಆರೋಗ್ಯ ಯೋಜನೆಯನ್ಬು ವಿಸ್ತರಿಸಲಾಗುವುದು. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದರಯ. ನಿವೃತ್ತ ನೌಕರರು ನಿರಂತರವಾಗಿ ಕ್ರಿಯಾಶೀಲರಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಿ […]