CM Flood Tour: ಎಂ. ಬಿ. ಪಾಟೀಲ ವಾಗ್ದಾಳಿ ಬಳಿಕ ಎಚ್ಚೆತ್ತ ಸರಕಾರ- ಮಳೆ ಪೀಡಿತ ಜಿಲ್ಲೆಗಳಿಗೆ ಭೇಟಿಗೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ಅತಿವೃಷ್ಟಿಯಿಂದ ಹಾನಿಯಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೆರವಾಗಿಯೂ ಮಾತನಾಡಿದ್ದೇನೆ. ಈಗ ಮಳೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಲಾಗುವುದು. ಸ್ಥಿತಿಗತಿಯನ್ನು ಅವಲಂಬಿಸಿ ಪರಿಹಾರಕ್ಕೆ ಸೂಚನೆ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಇದನ್ನು ಓದಿ: 

Govt M. B. Patil: ಸರಕಾರಕ್ಕೆ ಜನಹಿತಕ್ಕಿಂತ ಸ್ವಹಿತ ಮುಖ್ಯವಾಗಿದೆ- ಎಂ. ಬಿ. ಪಾಟೀಲ ವಾಗ್ದಾಳಿ

ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಎಂ. ಬಿ. ಪಾಟೀಲ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಟೀಕಾಸ್ತ್ರದ ಬಳಿಕ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದೆ. ಸರಕಾರ ಅತಿಚೃಷ್ಟಿ ಪೀಡಿತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸಿಎಂ ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ರಾಜ್ಯ ಸರಕಾರಕ್ಕೆ ಜನಹಿತಕ್ಕಿಂತ ಸ್ವಹಿತ ಮುಖ್ಯವಾಗಿದೆ ಎಂದು ಎಂ. ಬಿ. ಪಾಟೀಲ ಶನಿವಾರ ವಾಗ್ದಾಳಿ ನಡೆಸಿದ್ದರು. ಇದೀಗ ಎಚ್ಚೆತ್ತುಕೊಂಡಿರುವ ಸಿಎಂ ಮಳೆ ಪೀಡಿತ ಪ್ರದೇಶಗಳ ಭೇಟಿಗೆ ಮುಂದಾಗಿದ್ದಾರೆ.

Leave a Reply

ಹೊಸ ಪೋಸ್ಟ್‌