Board, Corp Cancel: ನಾನಾ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನ ರದ್ದು- ಆ 20 ಇಲಾಖೆಗಳು ಯಾವವು ಗೊತ್ತಾ?
ಬೆಂಗಳೂರು: ಬೆಳಿಗ್ಗೆ ಮೈಸೂರಿನಲ್ಲಷ್ಟೇ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನ ರದ್ದು ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನದ ವೇಳೆಗೆ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಸರಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ಆದೇಶಾನುಸಾರ ರಾಜ್ಯಮಟ್ಟದ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆಯಾ ಇಲಾಖೆಗಳ ವ್ಯಾಪ್ತಿಗೊಳಪಟ್ಟಂತೆ ಸರಕಾರದ ಆದೇಶವನ್ನು ಇಂದೇ ಹೊರಡಿಸುವಂತೆ ಹಾಗೂ ಹೊರಡಿಸಲಾದ ಆದೇಶದ ಪ್ರತಿಯನ್ನು ಖುದ್ದಾಗಿ ಮುಖ್ಯಗಳ ಕಾರ್ಯದರ್ಶಿಯವರ ಕಛೇರಿಗೆ […]
Survey Satish Jarakiholi: ಸಮೀಕ್ಷೆಗಳು ನಡೆಯುತ್ತಿರುತ್ತವೆ ಆದರೆ ಅಭ್ಯರ್ಥಿ ಆಯ್ಕೆ ಅಂತಿಮಾದ ನಂತರವಷ್ಟೆ ಫಲಿತಾಂಶವನ್ನು ಹೇಳಬಹುದು- ಸತೀಶ ಜಾರಕಿಹೊಳಿ
ವಿಜಯಪುರ: ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತ ಇರುತ್ತವೆ. ಈ ಸರ್ವೆಗಳಲ್ಲಿ ಏರಿಳಿತ ಆಗುತ್ತಿರುತ್ತದೆ. ಅಭ್ಯರ್ಥಿಗಳು ಆಯ್ಕೆಯಾದ ನಂತರ ಸಮೀಕ್ಷೆಗಳ ಫಲಿತಾಂಶದ ಬಗ್ಗೆ ಸ್ಪಷ್ಟವಾಗಿ ಹೇಳಬಹುದು ಎಂದು ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ವಿಜಯಪುರ ನಗರದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಜಿಲ್ಲಾ ಮಟ್ಟದ ನವ ಸಂಕಲ್ಪ ಚಿಂತನಾ ಶಿಬಿರದಲ್ಲಿ ಪಾಲ್ಗೋಳ್ಳಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಚುನಾವಣೆಗಳ ಕುರಿತು ಸರ್ವೆಗಳು ನಡೆಯುತ್ತ ಇರುತ್ತವೆ. ಸರ್ವೇಯಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಪ್ರತಿ […]
Rain DC Visit: ಕೃಷ್ಣಾ ನದಿ ನೀರಿನಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ವಿಜಯಪುರ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ
ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಲ್ಲದಿದ್ದರೂ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಪ್ರವಾಹ ಎದುರಿಸುತ್ತಿರುವ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ನಾನಾ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ ಮತ್ತು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯಲ್ಲಿ ಮಳೆ ಸಮರ್ಪಕವಾಗಿಲ್ಲ. ಆದರೆ, ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿಗೆ ನೀರನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಿಂದ ನೀರನ್ನು ಕೃಷ್ಣಾ ನದಿಗೆ ಹೊರ ಬಿಡಲಾಗುತ್ತಿದೆ. ಈ […]
CM Boards: ನಿಗಮ ಮಂಡಳಿಗಳಿಗೆ ಹೊಸಬರ ನೇಮಕ- ಒಂದೂವರೆ ವರ್ಷ ಮೇಲ್ಪಟ್ಟವರನ್ನು ಕೈಬಿಡಲಾಗುವುದು- ಸಿಎಂ
ಮೈಸೂರು: ನಿಗಮ ಮತ್ತು ಮಂಡಳಿಗಳಲ್ಲಿ ಒಂದೂವರೆ ವರ್ಷದಿಂದ ಮೇಲ್ಪಟ್ಟು ಅಧಿಕಾರದಲ್ಲಿ ಇರುವವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಆರು ತಿಂಗಳ ಹಿಂದೆ ನಡೆದ ಕೋರ್ ಸಮಿತಿಯಲ್ಲಿ ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎಂದು ತೀರ್ಮಾನವಾಗಿದೆ. ಹೊಸಬರಿಗೂ ಅವಕಾಶ ಒದಗಿಸಲಾಗುತ್ತಿದೆ. ಈ ನಿಟ್ಡಿನಲ್ಲಿ ಸೂಚನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಅತೀವೃಷ್ಠಿ, ಪ್ರವಾಹ ವಿಚಾರ ಸಂಕಷ್ಟದ […]
Maha Rain Alamatti: ಮಹಾಮಳೆ ಎಫೆಕ್ಟ್ ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ಹರಿದು ಬರುತ್ತಿರುವ ನೀರು ವಿದ್ಯುತ್ ಉತ್ಪಾದನೆಯೂ ಆರಂಭ
ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕರ್ನಾಟಕದ ಪಾಲಿಗೆ ವರದಾನವಾಗಿ ಪರಿಣಮಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಳೆ ವಿಳಂಬವಾಗಿದ್ದರೂ ಭರ್ಜರಿಯಾಗಿಯೇ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ತನ್ನ ವ್ಯಾಪ್ತಿಯ ಕೋಯ್ನಾ ಸೇರಿದಂತೆ ನಾನಾ ಜಲಾಷಯಗಳಿಂದ ಅಪಾರ ಪ್ರಮಾಮದಲ್ಲಿ ನೀರನ್ನು ಬಿಡುಗಡೆ ಮಾಡಿದ್ದು ಕೃಷ್ಣಾ ನದಿ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ಈಗ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಣೆಕಟ್ಟಿಯಲ್ಲಿ ನೀರಿನ ಸಂಗ್ರಹವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ 18 ಕ್ರಸ್ಟಗೇಟ್ ಗಳ ಮೂಲಕ ನೀರನ್ನು ಹೊರ ಬಿಡಲಾಗುತ್ತಿದೆ. ಆಲಮಟ್ಟಿ ಜಲಾಷಯದಲ್ಲಿ 519.60 ಮೀಟರ್ ವರೆಗೆ ಅಂದರೆ 123.08 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದ್ದು, ಇದರಲ್ಲಿ 506.87 ಮೀಟರ್ ವರೆಗೆ ಅಂದರೆ 17.61 ಟಿಎಂಸಿ ಡೆಡ್ ಸ್ಟೋರೇಜ್ ನೀರಿದೆ. ಈಗ ಜಲಾಷಯದಲ್ಲಿ 517.28 ಮೀ. ವರೆಗೆ 87.992 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಈ ಜಲಾಷಯದಲ್ಲಿ ಇಂದಿನ ದಿನಾಂಕಕ್ಕೆ 517.50 ಅಂದರೆ 90.864 ಟಿಎಂಸಿ ನೀರು ಸಂಗ್ರಹವಾಗಿತ್ತು. ಈಗ ಲೈವ್ ಸ್ಟೋರೇಜ್ 7.0302 ಟಿಎಂಸಿ ಇದ್ದು, ಕಳೆದ ವರ್ಷ ಈ ದಿನ 73.244 ಟಿಎಂಸಿ ನೀರು ಸಂಗ್ರಹವಿತ್ತು. […]