ವಿಜಯಪುರ: ಪ್ರತಿ ಮಂಗಳವಾರ ಜಿಲ್ಲೆಯ ಒಂದು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ ಕಂದಾಯ ಇಲಾಖೆಯ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ವಿಜಯಪುರ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಅವರು, ಬಳಿಕ ತಹಸೀಲ್ದಾರ ಕಚೇರಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದು ಮಾರ್ಗದರ್ಶನ ಮಾಡಿದರು. ಸರಕಾರಿ ಸೌಲಭ್ಯಗಳನ್ನು ಸುಲಭವಾಗಿ ಜನರು ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾರಂಭಿಸಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಿಂದ ಜನರಿಗೆ ಅನುಕೂಲವಾಗಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಹಿನ್ನೆಲೆಯಲ್ಲಿ, ಇದರ ಮುಂದುವರೆದ ಭಾಗವಾಗಿ ಕಂದಾಯ ಇಲಾಖೆಯ ಸಚಿವರು, ತಿಂಗಳಿನ ಎಲ್ಲಾ ಮಂಗಳವಾರದAದು ಜಿಲ್ಲಾಧಿಕಾರಿಗಳಿಂದ ತಾಲೂಕು ಕಚೇರಿ ಭೇಟಿ ಕಾರ್ಯಕ್ರಮ ರೂಪಿಸಿದ್ದಾರೆ. ತಾಲೂಕು ಕೇಂದ್ರಗಳಿಂದ ದೂರದ ಜಿಲ್ಲಾಧಿಕಾರಿಗಳವರ ಕಚೇರಿಗೆ ಹೋಗಿ ಅರ್ಜಿ ಕೊಡಲು ವಯೋವೃದ್ಧರು, ವಿಕಲಚೇತನರು ಹಾಗೂ ಮಹಿಳೆಯರಿಗೆ ತೊಂದರೆಯಾಗಬಾರದೆAದು ತಾಲೂಕು ಕಚೇರಿ ಭೇಟಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಾಲೂಕು ಕಚೇರಿ ಭೇಟಿ ಕಾರ್ಯಕ್ರಮದ ಮಹತ್ವದ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮನವರಿಕೆ ಮಾಡಿದರು.
ಪ್ರತಿ ತಾಲೂಕಿನಲ್ಲಿ ಅದರದೇ ಆದ ಸಮಸ್ಯೆಗಳಿರುತ್ತವೆ. ಆದ್ದರಿಂದ ನಾನಾ ಇಲಾಖೆಗಳ ಹೊಂದಾಣಿಕೆಯೊಂದಿಗೆ ಕಾರ್ಯಪ್ರವೃತ್ತರಾಗಲು ಸಲಹೆ ನೀಡಿದ ಅವರು, ತಾಲೂಕಿನ ಸಾರ್ವಜನಿಕರು ನಿರ್ದಿಷ್ಟ ಸಮಯದಲ್ಲಿ ಖುದ್ದು ತಮ್ಮನ್ನು ಭೇಟಿ ಮಾಡಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಅವರ ಅಹವಾಲುಗಳನ್ನು ಸಲ್ಲಿಸಲು ಸಹಾಯವಾಗುವ ಸಂಬAಧ ತಾವು ತಾಲೂಕು ತಹಸೀಲ್ದಾರ ಕಚೇರಿಗೆ ಬಂದಿರುವುದಾಗಿ ತಿಳಿಸಿದರು.
ತಾಲೂಕು ಕಚೇರಿ ಭೇಟಿಯಿದಾಗಿ, ತಾಲ್ಲೂಕು ಕಚೇರಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದಲ್ಲಿ ಅವುಗಳನ್ನು ಸರಿಪಡಿಸುವುದಕ್ಕೆ ಸಹ ಜಿಲ್ಲಾಡಳಿತಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ಮೂಲಭೂತ ಸೌಕರ್ಯ ಕೊರತೆಯ ಬಗ್ಗೆ ಅಗತ್ಯ ಮಾಹಿತಿ ಒದಗಿಸಲು ಇದೆ ವೇಳೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಅಧಿಕಾರಿ, ಸಿಬ್ಬಂದಿಗೆ ಎಚ್ಚರಿಕೆ: ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯ ಪಾಲನೆಗೆ ಒತ್ತು ಕೊಡಬೇಕು. ಅಂದಿನ ಕೆಲಸ ಕಾರ್ಯಗಳನ್ನು ಅಂದೇ ಮುಗಿಸಬೇಕು. ಅನವಶ್ಯಕವಾಗಿ ಜನತೆ ತಹಸೀಲ್ದಾರ ಕಚೇರಿಗಳಿಗೆ ಸುತ್ತಲು ಅವಕಾಶ ಮಾಡಬಾರದು. ಕರ್ತವ್ಯ ಪಾಲನೆಯಲ್ಲಿ ಏನಾದರು ಲೋಪದೋಷಗಳು ಕಂಡುಬಂದಲ್ಲಿ ಯಾವುದೆ ಮುಲಾಜಿಲ್ಲದೇ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಎಚ್ಚರಿಕೆ ನೀಡಿದರು.
ಸಸಿ ನೆಟ್ಟರು ಜಿಲ್ಲಾಧಿಕಾರಿಗಳು
ತಹಸೀಲ್ದಾರ ಕಚೇರಿಗೆ ಆಗಮಿಸುತ್ತಿದ್ದಂತೆ ಜಿಲ್ಲಾಧಿಕಾರಿಗಳು, ತಹಸೀಲ್ದಾರ ಕಚೇರಿ ಆವರಣದಲ್ಲಿ ಸಸಿ ನೆಟ್ಟರು. ಈ ಸಂದರ್ಭದಲ್ಲಿ ವಿಜಯಪುರ ತಾಲೂಕು ತಹಸೀಲ್ದಾರ ಸಿದ್ದರಾಮ ಬೋಸಗಿ ಹಾಗೂ ತಹಸೀಲ್ದಾರ ಕಚೇರಿಯ ಶೀರಸ್ತೇದಾರರು, ಸಿಬ್ಬಂದಿ ಉಪಸ್ಥಿತರಿದ್ದರು.