Rain CM Meeting: ಅತೀವೃಷ್ಠಿ ಹಿನ್ನೆಲೆ- ಮಧ್ಯಾಹ್ನ ನಾನಾ ಡಿಸಿಗಳೊಂದಿಗೆ ಸಿ‌ಎಂ ವಿಡಿಯೊ ಸಂವಾದ

ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನ‌ 1.30ಕ್ಕೆ ನಾನಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ‌ ಸಭೆ ನಡೆಸಲಿದ್ದಾರೆ.

ಅತಿವೃಷ್ಠಿ ಯಿಂದ ಹಾನಿಗೊಳಗಾದ ಜಿಲ್ಲೆಗಳ ಸಭೆ ಇದಾಗಿದೆ. ಮ. 1.30 ಕ್ಕೆ ದೇವನಹಳ್ಳಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆ ನಡೆಯಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ,
ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ,
ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ.

ಈ ಮೀಟಿಂಗ್ ನಲ್ಲಿ ಜಿಲ್ಲಾಧಿಕಾರಿ, ಸಿಎಒ, ಎಸ್ಪಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ‌ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ‌.

ಸಂಬಂಧಿಸಿದ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

Leave a Reply

ಹೊಸ ಪೋಸ್ಟ್‌