Psychiatrist Ramadurg: ಪೋಷಕರು ಮಕ್ಕಳ ಮಾನಸಿಕ ಆರೋಗ್ಯದ ಬಗ್ಗೆ ಅರಿತುಕೊಳ್ಳುವ ಅವಶ್ಯಕತೆಯಿದೆ- ಮನೋವೈದ್ಯ ಡಾ. ಸಂತೋಷ ರಾಮದುರ್ಗ

ವಿಜಯಪುರ: ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳಲ್ಲಿ ಆಗುವ ಮಾನಸಿಕ ಬದಲಾವಣೆಗಳು ಸಹಜವಾಗಿ ಬೇರೆಯಾಗಿರುತ್ತವೆ. ಆದ್ದರಿಂದ ಮಹಿಳೆ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಅರಿತುಕೊಳ್ಳುವ ಅವಶ್ಯಕತೆ ಇದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಮನೋರೋಗ ವಿಭಾಗದ ಪ್ರಾಧ್ಯಾಪಕ ಡಾ. ಸಂತೋಷ ರಾಮದುರ್ಗ ಹೇಳಿದರು. ವಿಜಯಪುರ ತಾಲೂಕಿನ ತೊರವಿ ಬಳಿ ಇರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಬಿ ಎಲ್ ಡಿ ಇ ಡೀಮ್ಡ್ ವಿವಿಯ ಮಾನಸಿಕ, ಸಾಮಾಜಿಕ ಆಪ್ತ […]

Basaveshwar Jatre: ಬಸವಣ್ಣನ ತವರೂರಲ್ಲಿ ಅದ್ದೂರಿಯಾಗಿ ಬಸವೇಶ್ವರ ಜಾತ್ರೆ ಆಚರಿಸಲು ತೀರ್ಮಾನ

ವಿಜಯಪುರ: 12ನೇ ಶತಮಾನದ ಸಮಾಜ‌ ಸುಧಾರಕ‌ ಅಣ್ಣ ಬಸವಣ್ಣನವರ ತವರು ವಿಜಯಪುರ ಜಿಲ್ಲೆಯ ಬಸವನ‌ ಬಾಗೇವಾಡಿಯಲ್ಲಿ ಈ ಬಾರಿ ವಿಶ್ವಗುರು ಬಸವೇಶ್ವರ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಈ ವರ್ಷದ ಜಾತ್ರಾ ಕಮಿಟಿ ರಚನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ನೂತನ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಈ ವಿಷಯ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ವಿಶ್ವಗುರು ಬಸವಣ್ಣನವರ ಜಾತ್ರೆಯು ಸರಳವಾಗಿ ಆಚರಿಸಲಾಗಿತ್ತು. ಆದರೆ, […]

Rahul Shindhe Visit: ಮುದ್ದೇಬಿಹಾಳ ತಾಲೂಕಿನಲ್ಲಿ ಸಿಇಓ ರಾಹುಲ್ ಶಿಂಧೆ ಪ್ರವಾಸ- ತಾ. ಪಂ. ಇಓ, ಪಿಡಿಓಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ಮುದ್ದೇಬಿಹಾಳ ತಾಲೂಕಿನಲ್ಲಿ ಪ್ರವಾಸ ಕೈಗೊಂಡ ತಾ. ಪಂ. ಆಡಳಿತಾಧಿಕಾರಿಗಳು ಮತ್ತು ಪಿಡಿಓಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.  ಮುದ್ದೇಬಿಹಾಳ ತಾಲೂಕಿನ ತಾಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ವಿವಿಧ ಯೋಜನೆಗಳ ಪ್ರಗತಿ ಕುರಿತು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಇಓ ಅವರು, ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ […]

DC Visits: ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಪ್ರವಾಸ

ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಆಲಮೇಲ ಮತ್ತು ಸಿಂದಗಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.  ಆಲಮೆಲ ಮತ್ತು ಸಿಂಧಗಿ ತಾಲೂಕುಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ಸ್ಥಿತಿಗತಿಯ ಖುದ್ದಾಗಿ ಪರಿಶೀಲನೆ ನಡೆಸಿದರು.  ಮೊದಲಿಗೆ ಆಲಮೇಲ್ ತಾಲೂಕಿನ ಸೊನ್ನ ಬ್ಯಾರೇಜ್‌ಗೆ ಭೇಟಿ ನೀಡಿ ಮಾಹಿತಿ ಪಡೆದರು. ಮೇಲ್ಭಾಗದ ನದಿಗಳಿಂದ ನೀರು ಬಿಡುವ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದು ಎಚ್ಚರಿಕೆಯಿಂದರಬೇಕು. ಬ್ಯಾರೇಜ್‌ನಿಂದ ನೀರು ಬಿಡುವ ಬಗ್ಗೆ ಜನತೆಗೆ ಮುಂಚಿತವಾಗಿ ತಿಳಿಸಿ ಜನತೆಗೆ ತೊಂದರೆಯಾಗದ ಹಾಗೆ ನೋಡಿಕೊಳ್ಳಬೇಕು ಎಂದು […]