DC Visits: ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಪ್ರವಾಸ

ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಆಲಮೇಲ ಮತ್ತು ಸಿಂದಗಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.  ಆಲಮೆಲ ಮತ್ತು ಸಿಂಧಗಿ ತಾಲೂಕುಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ಸ್ಥಿತಿಗತಿಯ ಖುದ್ದಾಗಿ ಪರಿಶೀಲನೆ ನಡೆಸಿದರು. 

ಮೊದಲಿಗೆ ಆಲಮೇಲ್ ತಾಲೂಕಿನ ಸೊನ್ನ ಬ್ಯಾರೇಜ್‌ಗೆ ಭೇಟಿ ನೀಡಿ ಮಾಹಿತಿ ಪಡೆದರು. ಮೇಲ್ಭಾಗದ ನದಿಗಳಿಂದ ನೀರು ಬಿಡುವ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದು ಎಚ್ಚರಿಕೆಯಿಂದರಬೇಕು. ಬ್ಯಾರೇಜ್‌ನಿಂದ ನೀರು ಬಿಡುವ ಬಗ್ಗೆ ಜನತೆಗೆ ಮುಂಚಿತವಾಗಿ ತಿಳಿಸಿ ಜನತೆಗೆ ತೊಂದರೆಯಾಗದ ಹಾಗೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸೊನ್ನ ಬ್ಯಾರೇಜಿಗೆ ಭೇಟಿ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ಬಳಿಕ ಆಲಮೇಲ್ ತಾಲೂಕಿನ ತಾರಾಪುರ ಮತ್ತು ತಾವರಖೆಡ್ ಗ್ರಾಮಗಳಿಗೆ ಭೇಟಿ ನೀಡಿದರು. ತಾವರಖೇಡ ಗ್ರಾಮಕ್ಕೆ ಸಂಬAಧಿಸಿದAತೆ ಹಕ್ಕುಪತ್ರ ವಿತರಣೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ತಾವರಖೇಡದಲ್ಲಿ ವಿದ್ಯುತ್, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಲು ಹೆಸ್ಕಾಂ ಮತ್ತು ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ಆಲಮೇಲ್ ತಾಲೂಕಿನ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದರು. ನವೀಕೃತ ತಹಸೀಲ್ದಾರ ಕಚೇರಿಯ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲು ತಹಸೀಲ್ದಾರ ಅವರಿಗೆ ಸೂಚಿಸಿದರು.

ಬಳಿಕ ಸಿಂದÀಗಿ ತಾಲೂಕಿಗೆ ಸಂಚರಿಸಿ, ಸಿಂದಗಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿದರು. ರೋಗಿಗಳೊಂದಿಗೆ ಸಮಾಲೋಚಿಸಿ ಆಸ್ಪತ್ರೆಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.

ಕೆಲವು ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ಅನಿಯಮಿತವಾಗಿ ಬರುತ್ತಾರೆ ಎನ್ನುವ ದೂರುಗಳು ಬಗ್ಗೆ ಇದೆ ವೇಳೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಸಂಬAಧಿಸಿದ ವೈದ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲು ತಾಲೂಕು ವೈದ್ಯಾಧಿಕಾರಿಗಳಿಗೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಇಂಡಿ ಉಪ ವಿಭಾಗಾಧಿಕಾರಿಗಳಾದ ರಾಮಚಂದ್ರ ಗಡಾದೆ, ಆಲ್‌ಮೇಲ್ ತಹಸೀಲ್ದಾರ ಸುರೇಶ ಎನ್ ಚವಲರ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌