ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲರವರನ್ನು ನಾಮನಿರ್ದೇಶನಗೊಳಿಸಿ, ವಿಧಾನ ಪರಿಷತ್ ಸಭಾಪತಿ ಆದೇಶ ಹೊರಡಿಸಿದ್ದಾರೆ.
ಸುನೀಲಗೌಡ ಪಾಟೀಲ ಅವರು ವಿಧಾನ ಪರಿಷತ್ ಸದಸ್ಯರಾಗಿರುವ ಚಾಲ್ತಿ ಅವಧಿ ದಿ. 05.01.2028 ವರೆಗೆ ಈ ನಾಮನಿರ್ದೇಶನ ಜಾರಿಯಲ್ಲಿ ಇರಲಿದೆ ಎಂದು ವಿಧಾನ ಪರಿಷತ್ ಸಭಾಪತಿ ರಘುನಾಥರಾವ ಮಲ್ಕಾಪುರ ಆದೇಶದಲ್ಲಿ ತಿಳಿಸಿದ್ದಾರೆ.