Kargil Vijay Divas: ಎ ಎಸ್ ಪಿ ಕಾಮರ್ಸ್ ಕಾಲೇಜಿನಲ್ಲಿ ಕಾರ್ಗಿಲ ವಿಜಯ ದಿವಸ ಆಚರಣೆ

ವಿಜಯಪುರ: ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ 23ನೇ ಕಾರ್ಗಿಲ ವಿಜಯ ದಿವಸವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಜಯಪುರ 36ನೇ ಕರ್ನಾಟಕ ಎನ್. ಸಿ. ಸಿ. ಬಟಾಲಿಯನ್ ಸುಬೇದಾರ ಮೇಜರ್ ಕುರಂದವಾಡಿ ಮಾತನಾಡಿ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ವಿವರಿಸಿದರು.

ಸುಬೆದಾರ ಮೇಜರ್ ಕುರಂದವಾಡಿ ಅವರನ್ನು ಸನ್ಮಾನಿಸಲಾಯಿತು

ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಯೋಧರು ತೋರಿದ ಸಾಹಸಗಾಥೆ ಪಾಕಿಸ್ತಾನಿ ಸೈನಿಕರು ಪರಾಜಯಗೊಂಡು ಫಲಾಯನ ಮಾಡಿದ ರೀತಿಯ ಕುರಿತು ಸುಬೇದಾರ ಮೇಜರ್ ಕುರಂದವಾಡಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸುಬೇದಾರ ಮೇಜರ್ ಕುರಂದವಾಡಿ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಪ್ರೊ. ಎಸ್.ಜಿ.ರೊಡಗಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಎನ್. ಸಿ. ಸಿ. ಅಧಿಕಾರಿ ಪ್ರೊ. ಎಸ್. ಎ. ಪಾಟೀಲ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದ ವೇಳೆ ಹುತಾತ್ಮರಾದ ಯೋಧರ ಸ್ಮರಣಾರ್ಥ ಮೇಣದಬತ್ತಿಯನ್ನು ಕೈಯಲ್ಲಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಲಾಯಿತು.

Leave a Reply

ಹೊಸ ಪೋಸ್ಟ್‌