BJP Mass Resign: ವಿಜಯಪುರದಲ್ಲೂ ಬಿಜೆಪಿ ಯುವ ಮುಖಂಡರ ಆಕ್ರೋಶ- ಒಂಬತ್ತು ನಾನಾ ಮಂಡಳಗಳ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಮೊದಲ ವರ್ಷಾಚರಣೆ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಬಿಜೆಪಿಯ ಒಂಬತ್ತು ಮಂಡಳಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಕೊಲೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಆಕ್ರೋಶ ಸ್ಪೋಟಗೊಂಡಿದ್ದು, ವಿಜಯಪುರದಲ್ಲಿಯೂ ಇದು ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ಮೂಲಕ ಬಹಿರಂಗವಾಗಿದೆ.

ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಪತ್ರ

ದಕ್ಷಿಣ ಕನ್ನಡ ಘಟನೆ ಮತ್ತು ಸರಕಾರದ ವೈಪಲ್ಯ ಖಂಡಿಸಿ ಬೇಸರಗೊಂಡಿರುವ ಬಿಜೆಪಿ‌ ಪದಾಧಿಕಾರಿಗಳು ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಹಾಗೂ ಒಂಭತ್ತು ಮಂಡಳಗಳ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಜಿಲ್ಲಾ ಸಾಮಾಜಿಕ ಜಾಲ ತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸಂದೀಪ ಪಾಟೀಲ್ ನೇತೃತ್ವದಲ್ಲಿ ರಾಜಿನಾಮೆ ನೀಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಅವರಿಗೆ ಬಿಜೆಪಿ ಕಾರ್ಯಕರ್ತರು ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಇದೊಂದು ಕೇವಲ ರಾಜಕೀಯ ಪಕ್ಷವಲ್ಲ. ಈ ಪಕ್ಷಕ್ಕೆ ತನ್ನದೇ ಆದಂಥ ಇತಿಹಾಸವಿದೆ. ಆದರೆ, ಸೈದ್ಧಾಂತಿಕ ವಿಚಾರಗಳಿಗಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿಯುತ್ತಿರುವುದು ವಿಪರ್ಯಾಸವಾಗಿದೆ. ಬಿಂದಿನ ಕಾಲಘಟ್ಟದಲ್ಲೂ ಕೂಡ ಬಿಜೆಪಿ ಕಾರ್ಯಕರ್ತರು ಸೈದ್ಧಾಂತಿಕ ವಿಚಾರಧಾರೆಗಳಿಗೆ ಹೋರಾಡುವಂತಹ ದುರ್ಗತಿ ಬಂದು ಒದಗಿರುವುದು ಕಾರ್ಯಕರ್ತರಿಗೆ ನೋವಾಗುತ್ತದೆ. ಹಿಂದೆಲ್ಲ ನಡೆದಂಥ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿ ಉಳಿದಿರುವ ಕಾರಣ ವಿಜಯಪುರ ಜಿಲ್ಲಾ ಸಮಿತಿ ಹಾಗೂ ಒಂಬತ್ತು ಮಂಡಳಗಳ ಪೂರ್ವ ಸಮಿತಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಧನ್ಯವಾದಗಳು ಎಂದು ಬಿಜೆಪಿ ಪದಾಧಿಕಾರಿಗಳು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಆನಂದ ಮುಚ್ಚಂಡಿ ರಾಜೀನಾಮೆ ಪತ್ರ

ಆನಂದ ಮುಚ್ಚಂಡಿ ರಾಜೀನಾಮೆ

ಬಿಜೆಪಿ ಯುವ ಮೊರ್ಚಾ ವಿಜಯಪುರ ನಗರ ಮಂಡಲ ಉಪಾಧ್ಯಕ್ಷ ಆನಂದ ಮುಚ್ಚಂಡಿ ಕೂಡ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ತಮ್ಮ‌ ಫೇಸ್ ಬುಕ್ ನಲ್ಲಿ ಈ ಮುಂಚೆ ಇದ್ದ I am with RSS, Bhajarangdal and Srheeramsena ಮಾಹಿತಿಯನ್ನು ತೆಗೆದು ಹಾಕಿದ್ದಾರೆ.

 

ಒಟ್ಟಾರೆ ಕೇಂದ್ರ ರಾಜ್ಯದಲ್ಲಿ ಡಬಲ್ ಎಂಜಿನ್ ಸರಕಾರಗಳಿದ್ದಾಗಲೂ ತಮಗೆ ರಕ್ಷಣೆ ಇಲ್ಲ ಎಂದು ಬಿಜೆಪಿ ಕಾರ್ಯಕರ್ತರು ತಮ್ಮ‌ ನಾನಾ ಪದಾಧಿಕಾರಿ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಮುಖಂಡರು ಮತ್ತು ಸರಕಾರಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

Leave a Reply

ಹೊಸ ಪೋಸ್ಟ್‌