ಬೆಂಗಳೂರು: ಉತ್ತಮ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಪ್ರಾಣೇಶ ಜಹಾಗಿರದಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರು ಈ ಸನ್ಮಾನ ಮಾಡಿದರು.
ಬಳಿಕ ಮಾತನಾಡಿದ ಸಚಿವರು, ಡಾ. ಪ್ರಾಣೇಶ ಜಹಾಗೀರದಾರ ಅವರು ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿಯೂ ಅವರು ಜನಪರ ಸೇವೆ ಮಾಡಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿದ್ದ ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.