Human Trafficking: ಮಾನವ ಕಳ್ಳ ಸಾಗಣೆ ತಡೆ ನಮ್ಮೆಲರ ಹೊಣೆ-ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಎಲ್.ಅರಸಿದ್ದಿ

ವಿಜಯಪುರ: ಮಾನವ ಮತ್ತು ಮಾನವನ ಅಂಗಾಂಗಳ ಕಳ್ಳಸಾಗಣೆ ತಡೆಯುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ವಿಜಯಪುರ ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಹೇಳಿದ್ದಾರೆ.

ವಿಜಯಪುರ ನಗರದ ರುಡಸೆಟ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ(ನಗರ ಮತ್ತು ಗ್ರಾಮೀಣ) ಸಂಯುಕ್ತಾಶ್ರಯದಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರುಡಸೆಟ್ ನಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ಕುರಿತು ಕಾರ್ಯಕ್ರಮ ನಡೆಯಿತು

ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಅಂಟಿದ ಕಳಂಕವಾಗಿದೆ.  ಇದರಲ್ಲಿ ಕೇವಲ ಮನಷ್ಯರನ್ನು ಮಾತ್ರ ಸಾಗಣೆ ಮಾಡದೇ, ಮನುಷ್ಯನ ನಾನಾ ಅಂಗಾಂಗಗಳನ್ನು ಸಹ ಕಳ್ಳ ಸಾಗಣೆ ಮಾಡಲಾಗುತ್ತಿದೆ.  ಇಂಥ ಹೀನ ಕೃತ್ಯವನ್ನು ತೊಡೆದು ಹಾಕಲು ಸರಕಾರದ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.  ಇದಕ್ಕೆ ಪೊಲೀಸ್ ಇಲಾಖೆ ಮಾತ್ರವಲ್ಲ ನಾನಾ ಇಲಾಖೆಗಳ ಸಹಕಾರ ಹಾಗೂ ಸಾರ್ವಜನಿಕರ ಸಹಾಭಾಗಿತ್ವ ಅಗತ್ಯ ಎಂದು ಅವರು ಹೇಳಿದರು.

ನ್ಯಾಯವಾದಿ ಉಮೇಶ ರಾಠೋಡ ಮಾತನಾಡಿ, ಮಾನವ ಕಳ್ಳ ಸಾಗಣೆ ತಡೆಗಟ್ಟಲು ನ್ಯಾಯಾಲಯಕ್ಕೆ ಸಾಕ್ಷ್ಯ ಅಗತ್ಯವಿರುತ್ತದೆ. ಆದ್ದರಿಂದ ಸಾರ್ವಜನಿಕರು ಇಂಥ ಪ್ರಕರಣಗಳಲ್ಲಿ ಸಾಕ್ಷಿ ಹೇಳಲು ಮುಂದೆ ಬರಬೇಕು.  ಇದರಿಂದಾಗಿ ಮಾನವ ಕಳ್ಳ ಸಾಗಣೆಯನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ. ಕೆ. ಚವ್ಹಾಣ ಮಾತನಾಡಿ, ಮಾನವ ಕಳ್ಳ ಸಾಗಣೆ ತಡೆಗಟ್ಟಲು ಎಲ್ಲ ಇಲಾಖೆಗಳ ಸಹಭಾಗಿತ್ವದ ಜೊತೆಗೆ, ಬದ್ಧತೆ ಅವಶ್ಯಕತೆ ಇದೆ.  ಮಾನವ ಕಳ್ಳ ಸಾಗಣೆ ತಡೆಗಟ್ಟುವ ಕುರಿತು ಅರಿವು ಮೂಡಿಸಲು ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸಲಹೆ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಹಾಗೂ ನ್ಯಾಯವಾದಿ ಸೂರ್ಯಕಾಂತ ಬಿರಾದಾರ ವಿಶೇಷ ಉಪನ್ಯಾಸ ನೀಡಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಗೀತಾ ಗುತ್ತರಗಿಮಠ ಅವರು ಮಾನವ ಕಳ್ಳ ಸಾಗಣೆ ತಡೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.  ಮಾನವ ಸರಪಳಿ ರಚಿಸಿ ಅರಿವು ಮೂಡಿಸಿದರು.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ವಿಜಯಪುರ, ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಮೌನೇಶ ಪೋತದಾರ ನಿರೂಪಿಸಿದರು. ಗುರುರಾಜ ಇಟಗಿ ಸ್ವಾಗತಿಸಿದರು.  ಜಯಶ್ರೀ ಪವಾರ ವಂದಿಸಿದರು.

Leave a Reply

ಹೊಸ ಪೋಸ್ಟ್‌