ವಿಜಯಪುರ: ನಗರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಉಪಕುಲಪತಿ ಡಾ. ಅರುಣ ಇನಾಮದಾರ ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಆವಿಷ್ಕಾರ ಮತ್ತು ಕೋಡುಗೆಗಳನ್ನು ಪರಿಗಣಿಸಿ ಪ್ರತಿ ವರ್ಷ ರಾಜ್ಯದ ನಾನಾ ಕ್ಷೇತ್ರಗಳ ಗಣ್ಯ ವಿಜ್ಞಾನಿಗಳಿಗೆ ಕೊಡ ಮಾಡುವ ಪ್ರಶಸ್ತಿ ಇದಾಗಿದೆ.
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 2022ನೇ ವರ್ಷದ ಪ್ರಶಸ್ತಿಯನ್ನು ಚರ್ಮರೋಗ ಖ್ಯಾತ ವೈದ್ಯರೂ ಆಗಿರುವ ಡಾ. ಅರುಣ ಇನಾಮದಾರ ಅವರಿಗೆ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ವೈಜ್ಞಾನಿಕ ಮುಖ್ಯ ಸಲಹೆಗಾರ ಡಾಕ್ಟರ್ ಅಜಯ್ ಸೂದ್ ಮತ್ತು ಅಕಾಡೆಮಿ ಮುಖ್ಯಸ್ಥ ಡಾ. ಅಯ್ಯಪ್ಪನ್ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಮತ್ತು ಇತರರು ಉಪಸ್ಥಿತರಿದ್ದರು.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕ್ಯಾಡೆಮಿ ಈ ಕಾರ್ಯಕ್ರಮ ಆಯೋಜಿಸಿತ್ತು.