ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ನನಗೆ ಕೋವಿಡ್-19 ಸೊಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಟೆಸ್ಟ್ ಮಾಡಿಸಿಲೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಗಣ್ಯರಿಂದ ಸಿಎಂ ಆರೊಗ್ಯ ವಿಚಾರಣೆ
ಕೋವಿಡ್ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿರುವ ನಾನಾ ಗಣ್ಯರು ಆರೋಗ್ಯ ವಿಚಾರಿಸಿದ್ದಾರೆ. ಮಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವರಾದ ಡಾ. ಅಶ್ವತನಾರಾಯಣ ಸಿ. ಎನ್., ಹಾಲಪ್ಪ ಆಚಾರ್, ಪ್ರಭು ಚೌಹಾಣ್, ಬಿ. ಸಿ. ನಾಗೇಶ ದೂರವಾಣಿ ಮೂಲಕ ಆರೋಗ್ಯ ವಿಚಾರಣೆ ಮಾಡಿದ್ದಾರೆ.
ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.