ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ನಾನಾ ವಿಭಾಗಗಳಿಗೆ ರಾಷ್ಟ್ರೀಯ ಮಂಡಳಿ ಮಾನ್ಯತೆ(National Board of Accreditation) ದೊರಕಿದೆ.
2022-23, 2023-24, 2024-25ರ ವರ್ಷದ ಎಂಜಿನಿಯರಿಂಗ್ ಪದವಿ ಕೋರ್ಸುಗಳಾದ ಕಂಪ್ಯೂಟರ್ ಸೈನ್ಸ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗಗಳಿಗೆ ಮೂರು ವರ್ಷದ ಮಾನ್ಯತೆ ದೊರೆತಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಮಂಡಳಿಯ ಮಾನ್ಯತೆ ದೊರೆತಿರುವುದಕ್ಕೆ ಬಿ ಎಲ್ ಡಿ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಜಿ. ಕೆ. ಪಾಟೀಲ ಮತ್ತು ಮುಖ್ಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಕುಲಕರ್ಣಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.