ವಿಜಯಪುರಛ ಅಣ್ಣ-ತಂಗಿ, ಅಕ್ಕ-ತಮ್ಮಂದಿರ ಪ್ರೀತಿ ಮತ್ತು ಬಾಂಧವ್ಯವನ್ನು ಬೆಸೆಯುವ ರಕ್ಷ ಬಂಧನ ಹಬ್ಬವನ್ನು ನಗರದ ರವೀಂದ್ರಾನಾಥ ಠಾಗೋರ ಶಾಲೆಯಲ್ಲಿ ವಿದ್ಯಾರ್ಥಿಗಳು ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.
ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿ ಸಂಭ್ರಮಿಸಿದರು. ಶಾಲಾ ಸಮವಸ್ತ್ರದ ಬದಲು ಬಣ್ಮ ಬಣ್ಮದ ಬಟ್ಟೆ ಧರಿಸಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಹೋದರ ಸಹೋದರಿಯರ ಬಾಂಧವ್ಯಕ್ಕೆ ಸಾಕ್ಷಿಯಾದರು.