ವಿಜಯಪುರ: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ರಕ್ತವನ್ನೇ ಹರಿಸಿದ್ದಾರೆ, ಅವರೆಲ್ಲರ ತ್ಯಾಗ, ಬಲಿದಾನದ ಫಲವಾಗಿ ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ, ಅವರಿಗೆ ನಾವು ಸದಾ ಋಣಿಯಾಗಿರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಬೆಳಗಾವಿ ವಿಭಾಗದ ಪ್ರಭಾರಿ, ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬಿಜೆಪಿ ಮುಖಂಡರಾದ ವಿವೇಕಾನಂದ ಡಬ್ಬಿ, ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.