ZP Flag: ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ- ರಾಹುಲ ಶಿಂಧೆ ಧ್ವಜಾರೋಹಣ

ವಿಜಯಪುರ: ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿ. ಪಂ. ಸಿಇಓ ರಾಹುಲ್ ಶಿಂಧೆ ಅವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

ಜಿ. ಪಂ. ಆವರಣದಲ್ಲಿ ಹಬ್ಬದ ಸಂಭ್ರಮ ಕಂಡು ಬಂದಿತು. ಕಚೇರಿಯ ಮಹಿಳಾ ನೌಕರರು ಬಣ್ಣಬಣ್ಣದ ರಂಗೋಲಿ ಬಿಡಿಸಿದ್ದರು. ಆವರಣದ ಎಲ್ಲ ದಿಕ್ಕುಗಳಲ್ಲಿ ತ್ರಿವರ್ಣದ ಬಲೂನ್‌ಗಳನ್ನು ಅಳವಡಿಸಿ ಕಚೇರಿಯನ್ನು ಸೌಂದರ್ಯೀಕರಣಗೊಳಿಸಲಾಗಿತ್ತು. ಧ್ವಜಾರೋಹಣ ಸಂದರ್ಭದಲ್ಲಿ ತ್ರಿವರ್ಣದ ಬಲೂನ್‌ಗಳನ್ನು ಆಕಾಶದತ್ತ ಹಾರಿಸಿ ಸಂಭ್ರಮಿಸಲಾಯಿತು.

ವಿಜಯಪುರ ಜಿ. ಪಂ. ನಲ್ಲಿ ಸಿಇಓ ರಾಹುಲ ಶಿಂಧೆ ಧ್ವಜಾರೋಹಣ ನೆರವೇರಿಸಿದರು

ಬಳಿಕ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸ್ಮರಿಸಿ, ಗೌರವ ಸಲ್ಲಿವುದರ ಜೊತೆಗೆ ಅವರ ಕನಸಿನ ಭಾರತವನ್ನು ನನಸು ಮಾಡಲು ಪಣ ತೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.


ಈ ದಿನ ಸರಕಾರಿ ಕೆಲಸದಲ್ಲಿ ತೊಡಗಿರುವ ನಾವು ಗ್ರಾಮೀಣ ಜನರ ಅಭಿವೃದ್ಧಿಗಾಗಿ ಪ್ರಾಮಾಣಿಕತೆಯಿಂದ ಶ್ರಮಿಸಬೇಕು. ಬಡವರಿಗೆ ಸಿಗುವ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ಮೂಲಕ 75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಆಚರಣೆ ಮಾಡುವುದರ ಮೂಲಕ ನಾವು ಅತ್ಯಂತ ಜವಾಬ್ದಾರಿಯಿಂದ ದೇಶ ಸೇವೆ ಮಾಡಬೇಕು ಎಂದು ರಾಹುಲ ಶಿಂಧೆ ತಿಳಿಸಿದರು.


ಈ ಸಂಧರ್ಭದಲ್ಲಿ ಜಿ. ಪಂ. ಉಪ ಕಾರ್ಯದರ್ಶಿಗಳಾದ ವಿಜಯಕುಮಾರ ಬಿ.ಆಜೂರ, ಅಧಿಕಾರಿಗಳಾದ ಬಸವರಾಜ ಬಿರಾದಾರ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಅಲ್ಲಮಪ್ರಭು ಬಿ.ಅಲ್ಲಾಪೂರ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಜಿ. ಪಂ. ನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌