BSY Respect: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಬಿ. ಎಸ್ ವೈ ನೇಮಕ- ಬೊಮ್ಮಾಯಿ, ಕಾರಜೋಳ ಅಭಿನಂದನೆ

ವಿಜಯಪುರ: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ‌ ಬಿ. ಎಸ್. ಯಡಿಯೂರಪ್ಪ ಅವರನ್ನು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಮಧ್ಯೆ ಹೈಕಮಾಂಡ್ ಈ ಹೊಸ ಜವಾಬ್ದಾರಿ ನೀಡಿದೆ.

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಪದಾಧಿಕಾರಿಗಳ ಪಟ್ಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಈ ಸಮಿತಿಯ ಅಧ್ಯಕ್ಷರಾಗಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇಂದ್ರ ಕೇಂದ್ರ ರಾಜನಾಥ ಸಿಂಗ್, ಅಮಿತ್ ಶಾ, ಸರ್ಬಾನಂದ ಸೊನೆವಾಲ್, ಕೆ. ಲಕ್ಷ್ಮಣ, ಇಕ್ಬಾಲ್ ಸಿಂಹ ಲಾಲಪುರಾ, ಸುಧಾ ಯಾದವ, ಸತ್ಯನಾರಾಯಣ ಜಟಿಯಾ ಮತ್ತು ಬಿಎಲ್ ಸಂತೋಷ ಅವರು ಈ ಸಮಿತಿಯ ಸದಸ್ಯಾಗಿದ್ದಾರೆ.

ಬಿ ಎಸ್ ವೈ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಪಕ್ಷದ ಅತ್ಯಂತ ಉನ್ನತವಾದ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಸಿಎಂ‌ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಕೋರಿದ್ದಾರೆ.

ಸಿಎಂ ಟ್ವೀಟ್:

ಕರೆ ಮಾಡಿ ಶುಭ ಕೋರಿದ ಸಿಎಂ

ಅಷ್ಟೇ ಅಲ್ಲ, ಬಿ ಎಸ್ ವೈ ಅವರಿಗೆ ಕರೆ ಮಾಡಿದ ಬೊಮ್ಮಾಯಿ, ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಬೊಮ್ಮಾಯಿ‌ ಹರ್ಷ ವ್ಯಕ್ತಪಡಿಸಿದರು.

ತಾವು ಈ ಹುದ್ದೆಗೆ ಏರಿರುವುದರಿಂದ ಕರ್ನಾಟಕ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಕರ್ನಾಟಕ‌ ಬಿಜೆಪಿಗೆ ಅಭೂತಪೂರ್ವ ಬೆಂಬಲ ಸಿಕ್ಕಂತಾಗಿದೆ. 2023 ರಲ್ಲಿ ರಾಜ್ಯ ವಿಧಾನ ಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. ತಮ್ಮನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಅವರು ತಿಳಿಸಿದರು.

ಸಚಿವ ಕಾರಜೋಳ ಅಭಿನಂದನೆ

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಯಡಿಯೂರಪ್ಪ ಅವರಿಗೆ ಶುಭ ಕೋರಿ‌ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ‌ಸದಸ್ಯರನ್ನಾಗಿ ನೇಮಕವಾದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್.‌ ಸಂತೋಷ್‌ ಅವರಿಗೆ ಅಭಿನಂದನೆಗಳು.

ಎಂದು ಸಚಿವ ಗೋವಿಂದ ಕಾರಜೋಳ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ಸಚಿವ ಗೋವಿಂದ ಕಾರಜೋಳ ಟ್ವೀಟ್:

Leave a Reply

ಹೊಸ ಪೋಸ್ಟ್‌