Congress Celebration: ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ ಗಾಂಧಿ, ದೇವರಾಜ ಅರಸ ಜನ್ಮದಿನ ಆಚರಣೆ

ವಿಜಯಪುರ: ಮಾಜಿ ಪ್ರಧಾನಿ ದಿ. ರಾಜೀವ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸ ಅವರ ಜನ್ಮದಿನವನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ದಿ. ರಾಜೀವ ಗಾಂಧಿಯವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ಈ ದೇಶದ ಪ್ರಧಾನಿಯಾಗಿ ಇಡೀ ಜಗತ್ತು ಭಾರತದ ಕಡೆಗೆ ನೋಡುವಂತೆ ಮಾಡಿದ್ದಾರೆ. ಯುವಕರಿಗೆ 18ನೇ ವರ್ಷಕ್ಕೆ ಮತದಾನ ಮಾಡುವ ಹಕ್ಕನ್ನು ನೀಡಿದ್ದಾರೆ. ಪಂಚಾಯಿತಿ ರಾಜ್ ವ್ಯವಸ್ಥೆ ಮತ್ತು ಅದರಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿ ಜಾರಿಗೆ ತಂದು ಮಹಿಳಾ ಸಬಲೀಕರಣಕ್ಕೆ ಹಾಗೂ ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಲು ಅನುಕುಲ‌ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಿ. ರಾಜೀವ ಗಾಂಧಿ, ದಿ. ಡಿ. ದೇವರಾಜ ಅರಸ ಜನ್ಮದಿನ ಆಚರಿಸಲಾಯಿತು

ಅಲ್ಲದೇ, ರಾಜೀವ ಗಾಂಧಿ ಅವರು ಇಡೀ ದೇಶದಲ್ಲಿ ಕಂಪ್ಯೂಟರೀಕರಣಕ್ಕೆ ಒತ್ತುಕೊಟ್ಟು ದೇಶವನ್ನು 21ನೇ ಶತಮಾನಕ್ಕೆ ಕೊಂಡೊಯ್ಯಲು ಕಾರಣೀಭೂತರಾಗಿದ್ದಾರೆ. ಅನೇಕ ಜನಪರ ಕಾರ್ಯಗಳನ್ನು ಕೈಗೆತ್ತಿಕೊಂಡು ಜನಪ್ರಿಯ ಪ್ರಧಾನಿಯಾಗಿ ಪ್ರತಿಯೊಬ್ಬರ ಮನಸ್ಸಿನಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದಾರೆ ಎಂದು ಅವರು ಹೇಳಿದರು.

ಇನ್ನು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ಬಡವರ, ದೀನ-ದಲಿತರ, ಹಿಂದುಳಿದ ವರ್ಗದವರ, ರೈತರ ಕಲ್ಯಾಣಕ್ಕಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿ ರಾಜ್ಯದ ಜನತೆ ಇಂದಿಗೂ ಅವರನ್ನು ಸ್ಮರಿಸುವಂತೆ ಮಾಡಿದ್ದಾರೆ. ಅಷ್ಟೇ ಅಲ್ಲ, ಅವರೊಬ್ಬ ಜನಪರ ನಾಯಕರಾಗಿದ್ದರು. ಈ ಇಬ್ಬರೂ ಧೀಮಂತ ನಾಯಕರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆದು ಈ ದೇಶಕ್ಕಾಗಿ, ರಾಜ್ಯಕ್ಕಾಗಿ ನಮ್ಮದೆಯಾದ ಕೊಡುಗೆ ನೀಡೋಣ ಎಂದು ವೈಜನಾಥ ಕರ್ಪೂರಮಠ ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರಅಹ್ಮದ ಬಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆರತಿ ಶಹಾಪೂರ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ವಿಜಯಕುಮಾರ ಘಾಟಗೆ, ವಸಂತ ಹೊನಮೊಡೆ, ಶಬ್ಬೀರ ಜಾಗೀರದಾರ, ಮಲ್ಲಿಕಾರ್ಜುನ ಪರಸನ್ನವರ, ನಿಂಗಪ್ಪ ಸಂಗಾಪೂರ, ಇಲಿಯಾಸ ಸಿದ್ದಿಕಿ, ಲಕ್ಷ್ಮಿ ಕ್ಷೀರಸಾಗರ, ಬಿ.ಎಸ್. ಗಸ್ತಿ, ಕೆ. ಬಿ. ಲೋಣಿ, ತಾಜುದ್ದೀನ ಖಲೀಫಾ, ಎಸ್. ಎನ್. ಮಾಳಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌