ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ ಫೋಟೋ ಅಂಟಿಸಿದ ಘಟನೆಯನ್ನು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾವರ್ಕರ್ ಭಾವಚಿತ್ರವನ್ನ ಕಾಂಗ್ರೆಸ್ ಕಚೇರಿಗೆ ಅಂಟಿಸಿರುವುದು ನಾಚಿಕೆಗೇಡಿನ ಸಂಗತಿ. ಇತಿಹಾಸವನ್ನು ಅರಿತವರು ಇತಿಹಾಸವನ್ನು ಸೃಷ್ಟಿ ಮಾಡುತ್ತಾರೆ. ಇತಿಹಾಸವನ್ನು ತಿರುಚಲು ಹೊರಟವರು ಇಂಥ ಅತಿರೇಕದ ವರ್ತನೆಗಳನ್ನ ಮಾಡುವುದರ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಾರೆ. ಸಾವರ್ಕರ್ ಭಾವಚಿತ್ರವನ್ನ ಕಾಂಗ್ರೆಸ್ ಕಚೇರಿಗೆ ಅಂಟಿಸಿದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆವರು ಆಗ್ರಹಿಸಿದ್ದಾರೆ.
ವಿಧಾನ ಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮೊಟ್ಟೆ ಎಸೆಯುವುದರ ಮೂಲಕ ಅತ್ಯಂತ ಕೆಟ್ಟ ಪರಂಪರೆಗೆ ಬಿಜೆಪಿ ನಾಂದಿ ಹಾಡಿದೆ. ಯಾವುದಾದರೂ ಸಣ್ಣಪುಟ್ಟ ವಿವಾದಗಳನ್ನು ಜೀವಂತವಾಗಿಡುವ ಮೂಲಕ ಜನರನ್ನು ಭಾವನಾತ್ಮಕವಾಗಿ ಬೇರೆಡೆ ಸೆಳೆಯುವ ತಂತ್ರಗಾರಿಕೆ ಈ ಹೋರಾಟಗಳಲ್ಲಿ ಎದ್ದು ಕಾಣುತ್ತಿದೆ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಹೆಚ್ಚಿನ ಭದ್ರತೆಯನ್ನು ನೀಡಬೇಕು ಎಂದು ಸಂಗಮೇಶ ಬಬಲೇಶ್ವರ ಒತ್ತಾಯಿಸಿದ್ದಾರೆ.