Doctors Award: ಡಾ. ಎಸ್. ಎಲ್. ಲಕ್ಕಣ್ಣವರ ಎಸ್. ಎಲ್. ಅವರಿಗೆ ಡಾಕ್ಟರ್ಸ್ ಡೆ ಅವಾರ್ಡ್- ಬುಧವಾರ ಬೆಂಗಳೂರಿನಲ್ಲಿ ಪ್ರಧಾನ

ವಿಜಯಪುರ: ಜಿಲ್ಲಾಸ್ಪತ್ರೆಯ ಮುಖ್ಯಸ್ಥ ಡಾ. ಎಸ್. ಎಲ್. ಲಕ್ಕಣ್ಣವರ ಅವರಿಗೆ ಡಾಕ್ಟರ್ಸ್ ಡೆ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ ಬುಧವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ರಾಜ್ಯ ಸರಕಾರ ಡಾ. ಬಿ. ಸಿ ರಾಯ್ ಅವರ ಹೆಸರಿನಲ್ಲಿ ಈ ಪ್ರಶಸ್ತಿಗೆ ನೀಡುತ್ತಿದೆ.

ವಿಜಯಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಡಾ. ಎಸ್. ಎಲ್. ಲಕ್ಕಣ್ಣವರ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
ಬುಧವಾರ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಡಾ. ಎಸ್. ಎಲ್. ಲಕ್ಕಣ್ಣವರ ಅವರಿಗೆ ಬಸವ ನಾಡು ವೆಬ್ ವತಿಯಿಂದ ಅಭಿನಂದನೆಗಳು.

Leave a Reply

ಹೊಸ ಪೋಸ್ಟ್‌