Irrigation Karjol: ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಪಂಪಗಳ ದುರಸ್ತಿಗೆ ಕ್ರಮ: ಸಚಿವ ಗೋವಿಂದ ಎಂ. ಕಾರಜೋಳ
ವಿಜಯಪುರ: ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಪಂಪುಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಲ ಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಇಂಡಿ ತಾಲೂಕಿನ ರೈತರ ಹೊಲಗಳಿಗೆ ನೀರುಣಿಸುವ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಎಲ್ಲ ಆರೂ ಪಂಪುಗಳು 2015 ರಿಂದ ದುರಸ್ತಿಯಾಗದೆ ನಿಷ್ಕ್ರಿಯಗೊಂಡಿದ್ದವು. ಇದರಿಂದಾಗಿ ಕಾಲುವೆಯ ಕೊನೆ ಭಾಗಕ್ಕೆ ಹಾಗೂ ಕಾಲುವೆಯ ಬಹುತೇಕ ಪ್ರದೇಶಕ್ಕೆ ನೀರು ಪೂರೈಕೆ ಆಗದೆ ವ್ಯತ್ಯಯ ಉಂಟಾಗಿತ್ತು. ಈಗ ಆರು […]
School Ganesha: ಗಣೇಶನ ವಿಚಾರಕ್ಕೆ ಗದ್ದಲ- ಶಾಲೆಯ ಹೊರಗೆ ಪಾಠ ಕೇಳಿದ ವಿದ್ಯಾರ್ಥಿಗಳು- ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ
ವಿಜಯಪುರ: ಸರಕಾರಿ ಶಾಲೆಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ವಿಚಾರ ತಾರಕಕ್ಕೇರಿ ವಿದ್ಯಾರ್ಥಿಗಳು ಶಾಲೆಗೆ ಕೀಲಿ ಹಾಕಿ ಪ್ರತಿಭಟನೆ ಮಾಡಿದ ಘಟನೆ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ,ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಮರದ ಕೆಳಗಡೆ ಕುಳಿತು ಪಾಠ ಆಲಿಸಿದ್ದಾರೆ. ಯಲಗೂರು ಸರಕಾರಿ ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡದೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜೊತೆ ಸೇರಿದ ಪೋಷಕರು ಕೂಡ ಪ್ರತಿಭಟನೆ ನಡೆಸಿದ್ದಾರೆ. ಈ ಶಾಲೆಯಲ್ಲಿ ಪ್ರತಿ ವರ್ಷ ಗಣೇಶ ಚತುರ್ಥಿ ಆಚರಣೆ […]
Rain Record: ಬಸವ ನಾಡಿನಲ್ಲಿ ಉತ್ತಮ ಮಳೆ- ದೇ. ಹಿಪ್ಪರಗಿಯಲ್ಲಿ 52 ಮಿಮಿ ಮಳೆ- ಉಳಿದೆಡೆ ಎಷ್ಟು ಗೊತ್ತಾ?
ವಿಜಯಪುರ: ಕಳೆದ 24 ಗಂಟೆಗಳಲ್ಲಿ ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ದೇವರ ಹಿಪ್ಪರಗಿಯಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 53 ಮಿಮಿ ಮಳೆ ದಾಖಲಾಗಿದೆ. ವಿಜಯಪುರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮತ್ತೆ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ನಾನಾ ಕಡೆ ಸುರಿದ ಮಳೆಯ ವಿವರ ಇಲ್ಲಿದೆ. ವಿಜಯಪುರ ತಾಲೂಕು ವಿಜಯಪುರ ನಗರ- 31.60 ಮಿಮಿ ನಾಗಠಾಣ- 6.40 ಮಿಮಿ ಭೂತ್ನಾಳ- 15.60 ಮಿಮಿ ಹಿಟ್ನಳ್ಳಿ- 28.80 ಮಿಮಿ ಕುಮಟಗಿ- […]