VC Corruption Yatnal: ವಿವಿ ಕುಲಪತಿಯಾಗುವವರು ನಾಲ್ಕೈದು ಕೋಟಿ ಹಣ ನೀಡಿ ಅಧಿಕಾರಕ್ಕೆ ಬಂದಿರುತ್ತಾರೆ- ನಂತರ ಭ್ರಷ್ಟಾಚಾರ ಮಾಡುತ್ತಾರೆ- ಶಾಸಕ ಯತ್ನಾಳ ಗಂಭೀರ ಆರೋಪ
ವಿಜಯಪುರ: ವಿಶ್ವವಿದ್ಯಾಲಯಗಳಿಗೆ ಕುಲಪತಿಗಳಾಗಿ ಬರುವವರು ನಾಲ್ಕೈದು ಕೋಟಿ ಹಣ ನೀಡಿಯೇ ಅಧಿಕಾರಕ್ಕೆ ಹುದ್ದೆ ವಹಿಸಿಕೊಂಡಿರುತ್ತಾರೆ. ನಂತರ ಅವರು ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುವ ಭ್ರಷ್ಟಾಚಾರ ವ್ಯವಸ್ಥೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೊಂದು ವಿಶ್ವವಿದ್ಯಾಲಯ ಸ್ಥಾಪನೆಯಾಗಬಾರದು. ಇದರಿಂದ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು. ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುತ್ತದೆ. ಉಪಕುಲಪತಿ ಆಗುವವರು ತಮ್ಮ ನೇಮಕಾತಿಗಾಗಿ ನಾಲ್ಕೈದು ಕೋಟಿ ರೂಪಾಯಿ […]
Teachers Day: ವಿದ್ಯಾರ್ಥಿಗಳ ಭವಿಷ್ಯ, ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ- ಡಾ. ಎಸ್. ಸಚ್ಚಿದಾನಂದ ಆರಾಧ್ಯ
ವಿಜಯಪುರ: ವಿದ್ಯಾರ್ಥಿಗಳ ಜೀವನ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹದ್ದಾಗಿದೆ ಎಂದು ರಾಜೀವ ಗಾಂಧಿ ಆರೋಗ್ಯ ವಿವಿ ನಿವೃತ್ತ ಉಪಕುಲಪತಿ ಡಾ.ಎಸ್.ಸಚ್ಚಿದಾನಂದ ಆರಾಧ್ಯ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೂತನ ಶಿಕ್ಷಣ ನೀತಿ (ಎನ್.ಇ.ಪಿ) ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಇಗ ಕೌಶಲ್ಯಾಧಾರಿತ ಶಿಕ್ಷಣ ಅಗತ್ಯವಾಗಿದ್ದು, ಶಿಕ್ಷಕರು ಕಾಲಕ್ಕೆ ತಕ್ಕಂತೆ ತಯಾರಾಗಬೇಕಿದೆ ಎಂದು ಹೇಳಿದರು. ವಿವಿ ಕುಲಪತಿ ಡಾ.ಆರ್.ಎಸ್.ಮುಧೋಳ […]
CM Yatnal: ಸೆ. 9 ರಂದು ವಿಜಯಪುರಕ್ಕೆ ಸಿಎಂ ಭೇಟಿ- ಸುಮಾರು ರೂ. 465 ಕೋ. ವೆಚ್ಚದ ನಾನಾ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ- ಯತ್ನಾಳ
ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ. 9 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ವಿಜಯಪುರ ನಗರ ವಿಧಾನ ಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ರೂ. 4.65 ಕೋ. ವೆಚ್ಚದ ನಾನಾ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 9 ರಂದು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ […]
Sprots Shivanand Patil: ಆಟದಲ್ಲಿ ಸೋಲು ಗೆಲುವಿಗಿಂತ ಪಾಲ್ಗೋಳ್ಳುವುದು ಮುಖ್ಯ- ಶಾಸಕ ಶಿವಾನಂದ ಪಾಟೀಲ
ವಿಜಯಪುರ: ಆಟಗಳಲ್ಲಿ ಸೋಲು-ಗೆಲುವಿಗಿಂತ ಪಾಲ್ಗೋಳ್ಳುವಿಕೆ ಮುಖ್ಯವಾಗಿದೆ ಎಂದು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಬಜಾರ ಸರ್ಕಲ್ ನಲ್ಲಿರುವ ಶ್ರೀ ಗಜಾನನ ತರುಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಸಲಾಗಿದ್ದ ಹೊನಲು ಬೆಳಕಿನ ಆಹ್ವಾನಿತ ಮಹಿಳಾ ಮತ್ತು ಪುರುಷರ ಅಂತಾರಾಜ್ಯ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಉದ್ಗಾಟಿಸಿ ಅವರು ಮಾತನಾಡಿದರು. ಶ್ರೀ ಗಜಾನನ ತರುಣ ಮಂಡಳಿ ಸತತ 50 ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸುತ್ತಿರುವುದು ಸಂತಸದ ವಿಷಯವಾಗಿದೆ. ಇದಕ್ಕಾಗಿ […]
Knowledge Malagi: ನಡೆ, ನುಡಿಯ ಮೂಲಕ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಬದಲಾವಣೆ ಮಾಡುವವರೆ ನಿಜವಾದ ಶಿಕ್ಷಕರು- ಡಾ. ವಿ. ವಿ. ಮಳಗಿ
ವಿಜಯಪುರ: ತಮ್ಮ ನಡೆ-ನುಡಿ ಮೂಲಕ ವಿದ್ಯಾರ್ಥಿಗಳನ್ನು ಧನಾತ್ಮಕ ಬದಲಾವಣೆಯಾಗುವಂತೆ ಮಾಡುತ್ತಾರೊ ಅವರೆ ನಿಜವಾದ ಶಿಕ್ಷಕರಾಗುತ್ತಾರೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಮೌಲ್ಯಮಾಪನ ಕುಲಸಚಿವ ಡಾ.ವಿ.ವಿ ಮಳಗಿ ಅಭಿಪ್ರಾಯಪಟ್ಟರು. ಬಿಎಲ್‍ಡಿಇ ಸಂಸ್ಥೆಯ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜ್ಞಾನವಿದ್ದಲ್ಲಿ ಸಹೃದಯತೆ ಇರುತ್ತದೆ. ಸ್ವಂತ ಅರಿವು, ನಿರಂತರ ಕಲಿಕೆ, ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಸಾಮಥ್ರ್ಯ, ಆಧುನಿಕ ತಂತ್ರಜ್ಞಾನಕ್ಕೆ ತಮ್ಮನ್ನು […]
Rain Details: ಢವಳಗಿಯಲ್ಲಿ 67 ಮಿಮಿ ಮಳೆ- ಜಿಲ್ಲೆಯ ಉಳಿದೆಡೆ ಸುರಿದ ಮಳೆಯ ಮಾಹಿತಿ ಇಲ್ಲಿದೆ
ವಿಜಯಪುರ: ಕಳೆದ 24 ಗಂಟೆಗಳಲ್ಲಿ ಬಸವ ನಾಡು ವಿಜಯಪುರ ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ತಾಳಿಕೋಟೆ ತಾಲೂಕಿನ ಢವಳಗಿಯಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 67 ಮಿಮಿ ಮಳೆ ದಾಖಲಾಗಿದೆ. ವಿಜಯಪುರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದ್ದರೆ, ಕೆಲವೆಡೆ ಭಾರಿ ಮತ್ತೆ ಅನೇಕ ಕಡೆ ಸಾಧಾರಣ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ನಾನಾ ಕಡೆ ಸುರಿದ ಮಳೆಯ ವಿವರ ಇಲ್ಲಿದೆ. ವಿಜಯಪುರ ತಾಲೂಕು ವಿಜಯಪುರ ನಗರ- 4.6 ಮಿಮಿ ನಾಗಠಾಣ- 00 ಮಿಮಿ ಭೂತ್ನಾಳ- 17.4 ಮಿಮಿ ಹಿಟ್ನಳ್ಳಿ- 6.6 ಮಿಮಿ […]