Yatnal Appreciation: ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ ಸೇವೆಯನ್ನು ಶ್ಲಾಘಿಸಿದ ಶಾಸಕ ಯತ್ನಾಳ
ವಿಜಯಪುರ: ನಗರದ ಜೋರಾಪುರ ಪೇಠದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ ಪ್ರತಿಷ್ಠಾಪಿಸಿದ್ದ ಸಂಕಲ್ಪ ಸಿದ್ಧಿ ಗಣಪತಿಯ ವಿಸರ್ಜನೆ ಮೆರವಣಿಗೆಯನ್ನು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶೀಯ ಕಲೆ, ಸಾಂಸ್ಕೃತಿಕ ಬಿಂಬವಾದ ಲೇಜಿಮ್ ನ್ನು ಮಂಡಳಿಯ ಕಾರ್ಯಕರ್ತರು ತರಬೇತಿ ಪಡೆದು ಮೆರವಣಿಗೆಯಲ್ಲಿ ಪ್ರದರ್ಶನ ನೀಡುತ್ತಿರುವುದು ಇತರರಿಗೆ ಮಾದರಿಯಾಗಿದೆ. ಅಲ್ಲದೆ, ಏಳು ದಿನಗಳ ಕಾಲ ಅನೇಕ ಸಾಮಾಜಿಕ ಸಾಂಸ್ಕೃತಿಕ ಮತ್ತು ಉಚಿತ ಲಸಿಕಾ ಮೇಳ ,ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ,ಆರೋಗ್ಯ ಅರಿವು […]
Central Team Visit: ಕೇಂದ್ರ ತಂಡದಿಂದ ಬಸವ ನಾಡಿನಲ್ಲಿ ಅತೀವೃಷ್ಠಿ, ಪ್ರವಾಹದಿಂದಾದ ಹಾನಿ ಪರಿಶೀಲನೆ
ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಉಂಟಾದ ಹಾನಿಯ ಕುರಿತು ಅಧ್ಯಯನ ನಡೆಸಲು ಕೇಂದ್ರ ತಂಡ ಜಿಲ್ಲೆಗೆ ಆಗಮಿಸಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಕೆ. ಮನೋಹರನ್ ಮತ್ತು ಕೇಂದ್ರ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ಬಿ. ತಿವಾರಿ ಅವರನ್ನು ಒಳಗೊಂಡ ಇಬ್ಬರು ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿದೆ. ತಾಳಿಕೋಟೆಗೆ ಆಗಮಿಸಿದ ಕೇಂದ್ರ ತಂಡವನ್ನು ವಿಜಯಪುರ ಜಿಲ್ಲಾಧಿಜಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಬರಮಾಡಿಕೊಂಡರು. ವಿಜಯಪುರ […]
Varsity Convocation: ಸೆ. 12 ರಂದು ಬಿ ಎಲ್ ಡಿ ಇ ಡೀಮ್ಡ್ ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮ
ವಿಜಯಪುರ: ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಕಾರ್ಯಕ್ರಮ ಸೆ. 12ರಂದು ಸೋಮವಾರ ರಂದು ವಿವಿ ಆವರಣದಲ್ಲಿರುವ ಗ್ರಂಥಾಲಯ ಸಭಾಭವನದಲ್ಲಿ ನಡೆಯಲಿದೆ. ಬೆ. 11ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಚೆನ್ನೈನ ಪೊರೂರ್ ನ ಶ್ರೀರಾಮಚಂದ್ರ ಉನ್ನತ ಶಿಕ್ಷಣ ಹಾಗೂ ಸಂಶೋಧನೆ ಸಂಸ್ಥೆಯ ಕುಲಪತಿ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪ್ರೊ. ಡಾ. ಪಿ. ವಿ. ವಿಜಯರಾಘವನ ಮುಖ್ಯ ಅತಿಥಿಗಳಾಗಿ ಪಾಲ್ಗೋಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. […]
Temple Bridge Drown: ವಿಜಯಪುರ ಜಿಲ್ಲೆಯಲ್ಲಿ ಮಳೆಯ ಅವಾಂತರ- ಕಳ್ಳಕವಟಗಿಯಲ್ಲಿ ದೇವಸ್ಥಾನ ಜಲಾವೃತ- ಅಡವಿ ಹುಲಗಬಾಳ ಬಳಿ ಕೊಚ್ಚಿ ಹೋದ ಸೇತುವೆ
ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುಳಿದ ಭಾರಿ ಮಳೆಯಿಂದಾಗಿ ದೇವಸ್ಥಾನ ಮುಳುಗಡೆ ಮತ್ರು ಸೇತುವೆ ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ. ಜಿಲ್ಲೆಯ ಅಲ್ಲಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಳೆದ ಹಲವಾರು ದಿನಗಳಿಂದ ಜಿಲ್ಲೆಯ ಅಲ್ಲಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಮೋಡ ಮುಸುಕಿದ ವಾತಾವರಣ ಜಿಲ್ಲೆಯ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಕಳ್ಳಕವಟಗಿ ಬಳಿ ದೇವಸ್ಥಾನ ಮುಳುಗಡೆ ಈ ಮಧ್ಯೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಬುಧವಾರ […]