Varsity Convocation: ಸೆ. 12 ರಂದು ಬಿ ಎಲ್ ಡಿ ಇ ಡೀಮ್ಡ್ ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮ

ವಿಜಯಪುರ: ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಕಾರ್ಯಕ್ರಮ ಸೆ. 12ರಂದು ಸೋಮವಾರ ರಂದು ವಿವಿ ಆವರಣದಲ್ಲಿರುವ ಗ್ರಂಥಾಲಯ ಸಭಾಭವನದಲ್ಲಿ ನಡೆಯಲಿದೆ.

ಬೆ. 11ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಚೆನ್ನೈನ ಪೊರೂರ್ ನ ಶ್ರೀರಾಮಚಂದ್ರ ಉನ್ನತ ಶಿಕ್ಷಣ ಹಾಗೂ ಸಂಶೋಧನೆ ಸಂಸ್ಥೆಯ ಕುಲಪತಿ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪ್ರೊ. ಡಾ. ಪಿ. ವಿ. ವಿಜಯರಾಘವನ ಮುಖ್ಯ ಅತಿಥಿಗಳಾಗಿ ಪಾಲ್ಗೋಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ. ಬಿ. ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.  ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ, ಆಡಳಿತ ಮಂಡಳಿ ಸದಸ್ಯರು, ವಿವಿ ಸಮ ಕುಲಪತಿಗ ಡಾ. ಅರುಣ್ ಸಿ. ಇನಾಮದಾರ, ವಿವಿ ಕುಲಸಚಿವ ಡಾ. ಆರ್. ವಿ. ಕುಲಕರ್ಣಿ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರ ಡಾ. ಅರವಿಂದ್ ವಿ. ಪಾಟೀಲ ಈ ಘಟಿಕೋತ್ಸವದಲ್ಲಿ ಉಪಸ್ಥಿತರಿರಲಿದ್ದಾರೆ.

ಈ ಸಮಾರಂಭದಲ್ಲಿ ಒಟ್ಟು 287 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ಪ್ರಧಾನ ಮಾಡಲಾಗುತ್ತದೆ.  ಇವರಲ್ಲಿ 4 ಜನರಿಗೆ ಪಿ ಎಚ್ ಡಿ, 62 ವೈದ್ಯಕೀಯ ಸ್ನಾತಕೋತ್ತರ ಪದವಿ, 2 ಎಮ್. ಎಚ್. ಎ 2 ಎಮ್. ಪಿ. ಎಚ್, 202 ಎಂಬಿಬಿಎಸ್ ಹಾಗೂ 15 ವಿದ್ಯಾರ್ಥಿಗಳಿಗೆ ಬಿ. ಎಸ್ಸಿ. (ಎಂ. ಐ. ಟಿ) ಪದವಿ ಪ್ರಮಾಣ ಪತ್ರಗಳನ್ನು ಪ್ರಧಾನ ನಡೆಯಲಿದೆ.

ಈ ಪದವಿ ಪ್ರಧಾನ ಸಮಾರಂಭದಲ್ಲಿ 17 ಚಿನ್ನದ ಪದಕಗಳು ಹಾಗೂ 3 ನಗದು ಬಹುಮಾನಗಳನ್ನು ಅರ್ಹ ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ.  ಸ್ನಾತಕೋತ್ತರ ವಿಭಾಗದಲ್ಲಿ ಡಾ. ನಮ್ರತಾ ಬಿ . ಎಂ- 2 ಚಿನ್ನದ ಪದಕಗಳನ್ನು, ಎಂಬಿಬಿಎಸ್ ಪದವಿ ವಿಭಾಗದಲ್ಲಿ ಡಾ. ಗೌರವ ಅರೊರಾ 6 ಚಿನ್ನದ ಪದಕ, ಡಾ. ರುಚಿ ಸಿಂಗ್ 3 ಚಿನ್ನದ ಪದಕ ಮತ್ತು 2 ನಗದು ಬಹುಮಾಗಳು ಹಾಗೂ ಡಾ. ಯಾಶಿಕಾ ಸಿ ಅವರಿಗೆ 2 ಚಿನ್ನದ ಪದಕಗಳನ್ನು ನೀಡಲಾಗುತ್ತಿದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಲಾಯಲದ ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌