Students Velidictory: ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ವಿಜಯಪುರ: ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರದ ಅಂತಿಮ ವರ್ಷದ ಪ್ರಶಿಕ್ಷಣಾರ್ಥಿಗಳ ಬೀಳ್ಕೋಡುವ ಸಮಾರಂಭ ವಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ತೊರವಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಂಗ್ಲಿಷ್ ಅಧ್ಯಯನ ವಿಭಾಗದ ಸ್ಥಳೀಯ ಮುಖ್ಯಸ್ಥ ಡಾ. ಫಯಾಜ್ ಅಹಮ್ಮದ್ ಎಚ್. ಇಳಕಲ ಮಾತನಾಡಿದರು.

ಉನ್ನತ ವ್ಯಾಸಂಗ ಮನುಷ್ಯನ ಯಶಸ್ವಿ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಪದವಿ, ಸ್ನಾತಕೋತ್ತರ ಪದವಿ, ಸಂಶೋಧನೆ ಪದವಿಗಳು ಶಿಕ್ಷಣದ ಮಹತ್ವವನ್ನು ಆಳವಾಗಿ ಅಧ್ಯಯನ ಮಾಡುವಲ್ಲಿ ನೆರವಾಗುತ್ತವೆ. ಒಬ್ಬ ಉತ್ತಮ ಕೇಳುಗಾರ ಮಾತ್ರ ಉತ್ತಮ ಶಿಕ್ಷಕನಾಗಲು ಸಾಧ್ಯ. ಪರಿಣಾಮಕಾರಿ ಬೋಧನೆ ಮಾಡಲು ಶಿಕ್ಷಕನಿಗೆ ಎಲ್ಲ ವಿಷಯಗಳ ಕುರಿತಾದ ಜ್ಞಾನ ಅವಶ್ಯಕವಾಗಿದೆ ಎಂದು ಅವರು ಹೇಳಿದರು.

ನಿಶ್ಚಿತ ಗುರಿಯೊಂದಿಗೆ ಸತತ ಪ್ರಯತ್ನವಿದ್ದರೆ ಯಶಸ್ಸು ದೊರೆಯುತ್ತದೆ. ಆ ಗುರಿ ತಲುಪಲು ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು. ಅದಕ್ಕಾಗಿ ಎಲ್ಲ ಜ್ಞಾನವನ್ನು ನಮ್ಮದಾಗಿಸಿಕೊಳ್ಳುವ ಮನೋಭಾವನೆ ಹೊಂದಿರಬೇಕು ಎಂದು ಡಾ. ಫಯಾಜ್ ಅಹಮ್ಮದ್ ಎಚ್. ಇಳಕಲ ಹೇಳಿದರು.

ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ಜ್ಯೋತಿ ಎಸ್. ಪಟ್ಟಣಶೆಟ್ಟಿ ಮಾತನಾಡಿ, ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಹಾಗೂ ಸಂಶೋಧನಾ ಪದವಿಗಳ ಪಠ್ಯಕ್ರಮ, ಪರೀಕ್ಷೆಗಳು ಹಾಗೂ ಅವುಗಳ ರೀತಿ-ನೀತಿಗಳ ಮಹತ್ವ ತಿಳಿಸಿ ಉತ್ತಮ ಶಿಕ್ಷಕರಾಗಿ ಹಾಗೂ ಉತ್ತಮ ಪ್ರಜೆಗಳಾಗಬೇಕು ಎಂದು ಹೇಳಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ವೈ. ಖಾಸನಿಸ್ ಮಾತನಾಡಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ ಹಾಗೂ ಡಾ. ಎಂ. ಬಿ. ಕೋರಿ ಅಂತಿಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರದ ಪ್ರಶಿಕ್ಷಣಾರ್ಥಿಗಳು ತಮ್ಮ ಅನುಭವ, ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರದ ಪ್ರಶಿಕ್ಷಣಾರ್ಥಿ ಅಶ್ವಿನಿ ಪೂಜಾರಿ ಪ್ರಾರ್ಥಿಸಿ, ಪರಿಚಯಿಸಿದರು. ಗೌತಮ ಸ್ವಾಗತಿಸಿದರು. ಶಿವಾನಂದ ನಿರೂಪಿಸಿದರು. ಸೌಜನ್ಯ ವಂದಿಸಿದರು.

Leave a Reply

ಹೊಸ ಪೋಸ್ಟ್‌