ವಿಜಯಪುರ: ಅರಣ್ಯ ಇಲಾಖೆಯ ನಿರ್ಮಿಸಿದ ಭೂತನಾಳ ಸಸ್ಯ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯಪುರ ನಗರದ ಹೊರವಲಯ ಭೂತನಾಳ ಬಳಿ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಅನುದಾನದಡಿ ನಾನಾ ಜಾತಿ ಹಾಗೂ ಅಳತೆಯ ಸಸಿಗಳನ್ನು 70000 ಸಸಿಗಳನ್ನು ಬೆಳೆಸಿ, ನಿರ್ವಹಣೆ ಮಾಡುತ್ತಿರುವ ಕಾರ್ಯವನ್ನು ವೀಕ್ಷಿಸಿದ ಅವರು ಖುಷಿ ವ್ಯಕ್ತಪಡಿಸಿದರು.
2021-22ನೇ ವರ್ಷದಲ್ಲಿ ಜಿಲ್ಲಾ ಪಂಚಾಯಿತಿಯ ಅಭಿವೃದ್ಧಿ ಅನುದಾನದಡಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಪರಿಶೀಲಿಸಿ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ಬೆಳೆಸಿ, ಮಾದರಿ ನೆಡುತೋಪುಗಳನ್ನು ನಿರ್ಮಾಣ ಮಾಡಲು ಸೂಚನೆ ನೀಡಿದರು. ಈಗಾಗಲೇ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾ. ಪಂ. ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಸಂಘಗಳ ಮಹಿಳೆಯರಿಂದ ನರ್ಸರಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಸ್ವ-ಸಹಾಯ ಸಂಘಗಳ ಸದಸ್ಯರನ್ನು ಸದರಿ ಸಸ್ಯಕ್ಷೇತ್ರಕ್ಕೆ ಭೇಟಿ ನೀಡಲು ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಯವರಿಗೆ ಸಿಇಓ ಈ ಸಂದರ್ಭದಲ್ಲಿ ಸೂಚನೆ ನೀಡಿದರು. ನಂತರ ಸಸ್ಯ ಕ್ಷೇತ್ರದ ಪಕ್ಕದಲ್ಲಿ ಕೆರೆ ಇದ್ದು, ಕೆರೆಗೆ ಹೊಂದಿಕೊಂಡಿರುವ ನಾಲಾಗಳಿಗೆ ಬಹುಕಮಾನುಗಳ ತಡೆಗೋಡೆ ನಿರ್ಮಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ವಿಜಯಪುರದ ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಗಿರೀಶ ಹಲಕುಡೆ, ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಸಂತೋಷಕುಮಾರ ಅಜೂರ ಹಾಗೂ ಇತರರು ಉಪಸ್ಥಿತರಿದ್ದರು.