Govt Sunilgouda Patil: ಗ್ರಾ. ಪಂ. ಅಧ್ಯಕ್ಷರಿಗೆ ಕೇರಳ ಮಾದರಿ ಸೌಲಭ್ಯ ನೀಡಲು ಸರಕಾರ ನಿರ್ಲಕ್ಷ್ಯ- ಸದನದಲ್ಲಿ ಏಳು ಬಾರಿ ಧ್ವನಿ ಎತ್ತಿದರೂ ಸ್ಪಂದಿಸಿಲ್ಲ- ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾ. ಪಂ. ಅಧ್ಯಕ್ಷರಿಗೆ ಕೇರಳ ಮಾದರಿಯಲ್ಲಿ ಸೌಲಭ್ಯ ನೀಡುವ ಬಗ್ಗೆ ಸರಕಾರ ಮತ್ತೊಮ್ಮೆ ನಿರಾಸಕ್ತಿ ತೋರಿಸಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಗ್ರಾ. ಪಂ. ಅಧ್ಯಕ್ಷರಿಗೆ ಕೇರಳ ಮಾದರಿಯಲ್ಲಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸುತ್ತ ಬಂದಿದ್ದೇನೆ.  ಈ ಕುರಿತು ಇಂದು ಸದನದಲ್ಲಿ ಕೇಳಲಾದ ಲಿಖಿತ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪಷ್ಟ ಉತ್ತರ ನೀಡದೆ ನುಣುಚಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾ. ಪಂ. […]

CEO Visits: ಬಸವನ ಬಾಗೇವಾಡಿ ತಾಲೂಕಿನ ನಾನಾ ಗ್ರಾಮಗಳಿಗೆ ರಾಹುಲ್ ಶಿಂಧೆ ಭೇಟಿ- ಕಾಮಗಾರಿ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಬಸವನ ಬಾಗೇವಾಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.  ಬಸವನ ಬಾಗೇವಾಡಿ ತಾಲೂಕಿನ ಯರನಾಳ, ಹುಣಶ್ಯಾಳ ಪಿ.ಬಿ ಹಾಗೂ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ಯರನಾಳ ಗ್ರಾ. ಪಂ. ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ತೆರೆದ ಬಾವಿ ಕಾಮಗಾರಿಯನ್ನು ವೀಕ್ಷಿಸಿದರು.  ಇದೇ ವೇಳೆ ಯರನಾಳ ಹಾಗೂ ಹುಣಶ್ಯಾಳ ಪಿ.ಬಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಜಲಜೀವನ […]

Award Falicitatiohn: ಚಟುವಟಿಕೆಯಿಂದ ಸೇವೆ ಮಾಡಿದಾಗ ಮಾತ್ರ ವೃತ್ತಿಯಲ್ಲಿ ಶ್ರೇಷ್ಠತೆ ಸಾಧ್ಯ- ಪಿಯುಸಿ ಡಿಡಿ ಎಸ್. ಎಸ್. ಬಗಲಿ

ವಿಜಯಪುರ: ಮನುಷ್ಯ ಸೋಮಾರಿಯಾಗದೆ ಚಟುವಟಿಕೆಗಳನ್ನು ಮಾಡುತ್ತಿದ್ದರೆ ಹೊಸ ಆವಿಷ್ಕಾರಗಳನ್ನು ಮಾಡಬಲ್ಲ ಹಾಗೂ ತನ್ನ ವೃತ್ತಿಯಲ್ಲಿ ಶ್ರೇಷ್ಠತೆಯನ್ನು ಸಾಧಿಸಬಹುದು ಎಂದು ವಿಜಯಪುರ ಪಿಯು ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎನ್. ಬಗಲಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶಾರದಾ ಸಭಾಭವನದಲ್ಲಿ ನಡೆದ 2022-23 ನೇ ಶೈಕ್ಷಣಿಕ ವರ್ಷದ ಅತ್ಯುತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿ ಪಡೆದ ಪ್ರೊ. ಎಂ. ಬಿ. ರಜಪೂತ ಅವರ ಸನ್ಮಾನ ಸಮಾರಂಭದಲ್ಲಿಅವರು ಮಾತನಾಡಿದರು. ಪ್ರಶಸ್ತಿಗಾಗಿ ಕಾರ್ಯ ನಿರ್ವಹಿಸದೆ ತನ್ನ […]

Foundation Day: ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ 21ನೇ ಸಂಸ್ಥಾಪನೆ ದಿನ ಆಚರಣೆ

ವಿಜಯಪುರ: ನಗರದ ಪ್ರತಿಷ್ಠಿತ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ 21ನೇ ಸಂಸ್ಥಾಪನೆ ದಿನವನ್ನು ಆಶ್ರಮ ರಸ್ತೆಯಲ್ಲಿರುವ ಶಾಲೆಯ ಆವರಣದಲ್ಲಿ ಆಚರಿಸಲಾಯಿತು.  ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷೆ ಶೀಲಾ ಬಿರಾದಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಳೆದ 21 ವರ್ಷಗಳಲ್ಲಿ ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಜಿಲ್ಲೆಯಲ್ಲಿಯೇ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದೆ.  ಈ ಶಾಲೆಯಲ್ಲಿ ಓದಿರುವ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಉನ್ನತವಾದ ಸ್ಥಾನಮಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.  ಇದಕ್ಕೆ ಈ ಶಾಲೆಯಲ್ಲಿ ಕಲಿಸಿದ ಗುರುಗಳು, ಓದಿದ ವಿದ್ಯಾರ್ಥಿಗಳು ಮತ್ತು […]