CEO Visits: ಬಸವನ ಬಾಗೇವಾಡಿ ತಾಲೂಕಿನ ನಾನಾ ಗ್ರಾಮಗಳಿಗೆ ರಾಹುಲ್ ಶಿಂಧೆ ಭೇಟಿ- ಕಾಮಗಾರಿ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಬಸವನ ಬಾಗೇವಾಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. 

ಬಸವನ ಬಾಗೇವಾಡಿ ತಾಲೂಕಿನ ಯರನಾಳ, ಹುಣಶ್ಯಾಳ ಪಿ.ಬಿ ಹಾಗೂ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.

ಯರನಾಳ ಬಳಿ ನರೇಗಾದಡಿ ನಿರ್ಮಿಸಲಾಗಿರುವ ತೆರೆದ ಭಾವಿ ವೀಕ್ಷಿಸಿದ ರಾಹುಲ ಶಿಂಧೆ

ಯರನಾಳ ಗ್ರಾ. ಪಂ. ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ತೆರೆದ ಬಾವಿ ಕಾಮಗಾರಿಯನ್ನು ವೀಕ್ಷಿಸಿದರು.  ಇದೇ ವೇಳೆ ಯರನಾಳ ಹಾಗೂ ಹುಣಶ್ಯಾಳ ಪಿ.ಬಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ಪ್ರತಿ ಮನೆ-ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಯ ನಳಗಳ ಜೋಡಣೆಯನ್ನು ಪರಿಶೀಲಿಸಿ, ಸದರಿ ನಳಗಳಲ್ಲಿ ನೀರು ಬರುತ್ತಿರುವುದನ್ನು ವೀಕ್ಷಿಸಿದರು. ಪೈಪ್ಲೈನ್ ಗಾಗಿ ಅಗೆದ ಸಿ.ಸಿ ರಸ್ತೆಯನ್ನು ಮರುನಿರ್ಮಾಣ ಮಾಡಿರುವುದನ್ನು ಪರಿಶೀಲಿಸಿದರು.

ಗ್ರಾಮೀಣ ಜನರು ಕುಡಿಯಲು ನೀರು ಯೋಗ್ಯವಿದೆಯೋ? ಇಲ್ಲವೋ? ಎಂದು ಅಲ್ಲಿನ ಗ್ರಾಮಸ್ಥರ ಜೊತೆ ಚರ್ಚೆ ಮಾಡಿದರು.  ಗ್ರಾಮಗಳಲ್ಲಿ ಹಳೆಯ ನಳಗಳ ಮೂಲಕ ಎರಡು ದಿನಗಳಿಗೊಮ್ಮೆ ನೀರನ್ನು ಪೂರೈಸಲಾಗುತ್ತಿತ್ತು. ಈ ಯೋಜನೆ ಜಾರಿಗೆ ಬಂದಮೇಲೆ ನಮಗೆ ಪ್ರತಿದಿನ ನೀರು ಪೂರೈಕೆಯಾಗುತ್ತಿದೆ. ಮೊದಲಿಗಿಂತ ಶೇ.50ರಷ್ಟು ನೀರು ಉಳಿತಾಯಾಗುತ್ತಿದೆ ಎಂದು ಅಲ್ಲಿನ ಸಾರ್ವಜನಿಕರು ತಮ್ಮ ಅಭಿಪ್ರಾಯ ಹಂಚಿಕೊಂಡರು.

 

ಈ ಸಂದರ್ಭದಲ್ಲಿ ಗ್ರಾಮೀಣ ಜನರಿಗೆ ನಳಗಳ ಮೂಲಕ ಉತ್ತಮ ಗುಣಮಟ್ಟಶುದ್ಧ ಕುಡಿಯುವ ನೀರು)ದ ನೀರನ್ನು ಪೂರೈಕೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಂತರ ಹೂವಿನ ಹಿಪ್ಪರಗಿ ಗ್ರಾ. ಪಂ. ಕಾರ್ಯಾಲಯಕ್ಕೆ ಭೇಟಿ ನೀಡಿ ಘನತ್ಯಾಜ್ಯ ವಿಲೇವಾರಿ ಘಟಕ, ಸಮುದಾಯ ಭವನ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಕುರಿತು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಸದರಿ ಕಾಮಗಾರಿಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ರಾಹುಲ ಶಿಂಧೆ ಅವರು ಸೂಚನೆ ನೀಡಿದರು.

 

 

ಈ ಸಂದರ್ಭದಲ್ಲಿ ಬಸವನ ಬಾಗೇವಾಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ, ಎಕ್ಸಿಕ್ಯೂಟಿವ್ ಎಂಜಿನಿಯರ್ ಚಂದ್ರಶೇಖರ ಚವ್ಹಾಣ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಸ್.ಬಿ. ಪಾಟೀಲ, ಯರನಾಳ ಪಿಡಿಓ ರವಿ ಗುಂಡಳ್ಳಿ, ಹುಣಶ್ಯಾಳ ಪಿ. ಬಿ. ಮತ್ತು ಹೂವಿನ ಹಿಪ್ಪರಗಿ ಪಿಡಿಓ ಬಿ. ಎಂ. ಬಿಳೇಕುದರಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌