Cricket Selection: ಬಸವ ನಾಡಿನ ಯುವತಿ ಕರ್ನಾಟಕ U-19 ಮಹಿಳಾ T-20 ಕ್ರಿಕೆಟ್ ತಂಡಕ್ಕೆ ಆಯ್ಕೆ

ವಿಜಯಪುರ : ಬಿ ಎಲ್ ಡಿ ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಬಿ. ಕಾಂ. ಮೊದಲ ವರ್ಷದ ವಿದ್ಯಾರ್ಥಿನಿ ಅನ್ನಪೂರ್ಣ ಜಿ. ಭೋಸಲೆ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ-20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ U-19 ಮಹಿಳಾ ಕ್ರಿಕೆಟ್ T-20 ತಂಡ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 15 ಜನ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಿದ್ದು, ಅನ್ನಪೂರ್ಣ ಜಿ. ಭೋಸಲೆ ವಿಕೆಟ್ ಕೀಪರ್ ಬ್ಯಾಟ್ಸಮನ್ ಆಗಿ ಆಯ್ಕೆಯಾಗಿದ್ದಾರೆ.

ಹೈದರಾಬಾದಿನಲ್ಲಿ ಅ. 1 ರಿಂದ ಅ. 8ರ ವರೆಗೆ ಮಹಿಳೆಯರ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.

ಅನ್ನಪೂರ್ಣ ಭೋಸಲೆ

2019 ರಲ್ಲಿ 16 ವರ್ಷದೊಳಗಿನ ಏಕದಿನ ತಂಡಕ್ಕೆ ಆಯ್ಜೆಯಾಗಿದ್ದ ಅವರು, 2021ರಲ್ಲಿ 19 ವರ್ಷದೊಳಗಿನ ಏಕದಿನ ತಂಡಕ್ಕೂ ಆಯ್ಕೆಯಾಗಿದ್ದಾರೆ. ಈಗ 19 ವರ್ಷದೊಳಗಿನ ಮಹಿಳಾ ಟಿ-20 ತಂಡಕ್ಕೆ ಆಯ್ಕೆಯಾಗಿದ್ದಾರೆ. 2020ರಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಆಯ್ಕೆ ನಡೆದಿರಲಿಲ್ಲ.

ಅನ್ನಪೂರ್ಣ ಭೋಸಲೆ

ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ. ಬಿ. ಪಾಟೀಲ ಅವರು ಅನ್ನಪೂರ್ಣ ಭೋಸಲೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಇನ್ನೂ ಹೆಚ್ಚಿನ ಸಾಧನೆ ಮಾಡಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲಿ ಎಂದು ಶುಭ ಕೋರಿದ್ದಾರೆ.

Leave a Reply

ಹೊಸ ಪೋಸ್ಟ್‌