Rabis Day: ರೇಬಿಸ್ ತಡೆಯಲು ಸಾಕುಪ್ರಾಣಿಗಳಿಗೆ ಲಸಿಕೆ ಹಾಕಿಸಬೇಕು- ನಾಯಿ ಕಡಿತಕ್ಕೆ ಒಳಗಾದವರು ಸೂಕ್ತ ಚಿಕಿತ್ಸೆ ಪಡೆಯಬೇಕು- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ಮಾರಕ ರೇಬಿಸ್ ರೋಗ ತಡೆಯಲು ಸಾಕು ಪ್ರಾಣಿಗಳಿಗೆ ರೇಬಿಸ್ ಲಸಿಕೆ ಹಾಕಿಸಬೇಕು ಮತ್ತು ಹುಚ್ಚು ನಾಯಿ ಕಡಿತಕ್ಕೆ ಒಳಗಾದವರು ಯಾವುದೇ ಮೂಢ ನಂಬಿಕೆಗಳಿಗೆ ಅವಕಾಶ ನೀಡದೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಬಿ ಎಲ್ ಡಿ ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಹಾಗೂ ಉನ್ನತ ಭಾರತ ಅಭಿಯಾನ ಸಮಿತಿಯ ಅಧ್ಯಕ್ಷ ಡಾ. ಮಂಜುನಾಥ.ಕೋಟೆಣ್ಣವರ ಹೇಳಿದರು.

ಅವರು ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಆಂಗ್ಲ ಮಾಧ್ಯ ಪ್ರೌಢ ಶಾಲೆಯಲ್ಲಿ ನಡೆದ ವಿಶ್ವ ರೇಬಿಸ್ ರೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಕ್ಕಲಿ ಗ್ರಾಮದಲ್ಲಿ ರೇಬಿಸ್ ದಿನ ಆಚರಿಸಲಾಯಿತು

ನಾಯಿ ಕಡಿದರೆ ಗಾಯವನ್ನು ಸ್ವಚ್ಛವಾಗಿ ಸೋಪು ನೀರಿನಿಂದ ತೊಳೆದು, ನಿಯಮಿತವಾಗಿ ಲಸಿಕೆ ಪಡೆಯಬೇಕು.  ವೈದ್ಯಕೀಯ ಉಪಚಾ ಪಡೆದರೆ ರೇಬಿಸ್ ರೋಗದಿಂದ ಪಾರಾಗಬಹುದು ಎಂದು ಅವರು ಹೇಳಿದರು.

ಬಿ ಎಲ್ ಡಿ ಇ ಸಂಸ್ಥೆಯ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗ, ಉಕ್ಕಲಿ ಸಮುದಾಯ ವೈದ್ಯಕೀಯ ವಿಭಾಗದ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರ ಮತ್ತು ಉನ್ನತ ಭಾರತ ಅಭಿಯಾನ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.

ಶಿಕ್ಷಕ ಅಪ್ಪು.ಆಸಂಗಿ ಸ್ವಾಗತಿಸಿದರು.  ಸಮುದಾಯ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ.ಯಂಕಂಚಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಸ್ತ್ರ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಂಜುನಾಥ ಸಾವಂತ ಮಾತನಾಡಿ, ರೇಬಿಸ್ ರೋಗ ಹರಡುವ ಬಗೆ, ಅದರ ರೋಗ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಮತ್ತು ಚಿಕಿತ್ಸಾ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ಜಿ. ಬಿ. ಮನಗೂಳಿ ಮಾತನಾಡಿದರು.  ಈ ಸಂದರ್ಭದಲ್ಲಿ ಶಾಲಾ ಮಕ್ಕಳೊಂದಿಗಿನ ಸಂವಾದ ಕೂಡ ನಡೆಯಿತು.

ಈ ಸಂದರ್ಭದಲ್ಲಿ ವಿದ್ಯಾ ಹಿರೇಮಠ, ಸರಕಾರಿ ಆಸ್ಪತ್ರೆಯ ಶುಶ್ರೂಶಕಿಯಕರು, ಆಶಾ ಕಾರ್ಯಕರ್ತರು, ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಸಾಮಾಜಿಕ ಕಾರ್ಯಕರ್ತ ಸಂಜೀವ ಖಾನಗೌಡ್ರ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Leave a Reply

ಹೊಸ ಪೋಸ್ಟ್‌