CM Tour: ಶುಕ್ರವಾರ ಆಲಮಟ್ಟಿಗೆ ಜಲಾಷಯಕ್ಕೆ ಸಿಎಂ‌ ಬಾಗೀನ ಹಿನ್ನೆಲೆ- ಸಿದ್ಧತೆ ಪರಿಶೀಲಿಸಿದ ಡಿಸಿ, ಎಸ್ಪಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬಸವ ನಾಡಿನ ಆಲಮಟ್ಟಿಗೆ ಭೇಟಿ ನೀಡುತ್ತಿದ್ದು, ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಲಿದ್ದಾರೆ.

ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರ

ಈ ಹಿನ್ನೆಲೆಯಲ್ಲಿ ಆಲಮಟ್ಟಿಯಲ್ಲಿ ನಡೆಸಿದಿರುವ ಸಿದ್ಧತೆಗಳನ್ನು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಆಲಮಟ್ಟಿಗೆ ತೆರಳಿ ಪರಿಶೀಲನೆ ನಡೆಸಿದರು.

ಆಲಮಟ್ಟಿ ಅಣೆಕಟ್ಟು ಮತ್ತು ಹೆಲಿಪ್ಯಾಡ್ ಗೆ ಭೇಟಿ ನೀಡಿದ ಉಭಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಶುಕ್ರವಾತ ಬೆಳಿಗ್ಗೆ ಹುಬ್ಬಳ್ಳಿಯಿಂದ ನಿಡಗುಂದಿ ತಾಲೂಕಿನ ಅಲಮಟ್ಟಿಗೆ ಬೆಳಿಗ್ಗೆ 10ಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷ್ಣೆಯ ಜಲಧಿಗೆ ಬಾಗಿನ ಅರ್ಪಿಸಲಿದ್ದಾರೆ. ನಂತರ ಕೃಷ್ಣಾ ಭಾಗ್ಯ ಜಲ ನಿಗಮದ ಎಂಡಿ ಕಚೇರಿಯ ಬಳಿಯ ನೂತನ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸಿಎಂ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ರೂ.14.50 ಕೋ. ವೆಚ್ಚದ 15 ಕೊಠಡಿಗಳ ಅತ್ಯಾಧುನಿಕ ಕೇವಲ ಸೌಲಭ್ಯಗಳ ಪ್ರವಾಸಿ ಮಂದಿರ ಇದಾಗದೆ.

ಸಿಎಂ ಆಲಮಟ್ಟಿಯಲ್ಲಿ ಒಂದು ಗಂಟೆ ಮಾತ್ರ ಇರಲಿದ್ದಾರೆ. ಈ ಕಾರ್ಯಕ್ರಮ ಸರಳವಾಗಿ ನಡೆಯಲಿದೆ ಎಂದು ಕೆ ಬಿ ಜೆ ಎನ್ ಎಲ್ ಎಂಜಿನಿಯರ್ ಡಿ. ಬಸವರಾಜ ಅವರು ಮಾಹಿತಿ ತಿಳಿಸಿದ್ದಾರೆ.

ಆಲಮಟ್ಟಿ ಜಲಾಷುದ ನೀರಿನ ಮಟ್ಟ

ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರ 519.60 ಮೀ ಎತ್ತರವಿದೆ. ಈ ಜಲಾಷಯದಲ್ಲಿ 519.60 ಮೀಟರ್ ನೀರು ಸಂಗ್ರಹ ಸಾಮರ್ಥ್ಯವಿದ್ದು, ಈಗ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ.

 

ಆಲಮಟ್ಟಿ ಡ್ಯಾಂ ಗೆ ಈಗ 9136 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರನಾಣದ ನೀರನ್ನು ಹೊರ ಬಿಡಲಾಗುತ್ತಿದೆ.

ಶುಕ್ರಚಾರ ನಡೆಯುವ ಈ ಕಾರ್ಯಕ್ರಮಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಸೇರಿದಂತೆ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎ. ಎಸ್. ಪಾಟೀಲ್ ನಡಹಳ್ಳಿ, ಶಿವಾನಂದ ಎಸ್. ಪಾಟೀಲ, ಎಂ. ಬಿ. ಪಾಟೀಲ, ಯಶವಂತರಾಯಗೌಡ ಪಾಟೀಲ, ರಮೇಶ ಬೂಸನೂರ, ಸುನೀಲಗೌಡಡ ಪಾಟೀಲ, ಪಿ. ಎಚ್. ಪೂಜಾರ, ಹಣಮಂತ ನಿರಾಣಿ, ಪ್ರಕಾಶ ಹುಕ್ಕೇರಿ ಸೇರಿದಂತೆ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.

ಈ ಬಾಗಿನ ಅರ್ಪಣೆ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿಗಳು ವಿಜಯಪುರಕ್ಕೆ ತೆರಳಿ ಅಲ್ಲಿನರ ಸೈನಿಕ ಸ್ಕೂಲ್ ಆವರಣದಲ್ಲಿ ಹಾಕಿ ಕ್ರೀಡಾಂಗಣ ಉದ್ಘಾಟನೆ ಮಾಡಲಿದ್ದಾರೆ.

ನಂತರ ಜ್ಞಾನಯೋಗಿ ಸಿದ್ದೇಶ್ವರ ಸೂಪರ್ ಸ್ಪಷಾಲಿಟಿ ಆಸ್ಪತ್ರೆ ಉದ್ಘಾಟನೆ ಮಾಡಿ ಸಂಜೆ ಬೆಂಗಳೂರಿನತ್ತ ಪ್ರಯಾಣಬೆಳಸಲಿದ್ದಾರೆ.

 

ಪೊಲೀಸ್ ಬಂದೋಬಸ್ತ್

ಸಿಎಂ ಬಸವರಾಜ ಬೊಮ್ಮಾಯಿ ಆನ ಹಿನ್ನೆಲೆಯಲ್ಲಿ ಆಲಮಟ್ಟಿ ಮತ್ತು ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಬಿಗೀ ಪೊಲೀಸ್ ಬಂದೋಬಸ್ತ
ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪ್ರಮುಖ ಸ್ಥಳಗಳಲ್ಲಿ ಪೋಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ಓರ್ವ ಎಎಸ್ಪಿ, ಮೂರು ಜನ ಸಿಪಿಐ, 15 ಜನ ಪಿ ಎಸ್ ಐ, 150 ಜನ ಸಿಬ್ಬಂದಿಗಳು ಸೇರಿ ಕೆ ಎಸ್ ಐ ಎಸ್ ಎಫ್ ನ ಪೊಲೀಸರು ಸಿಬ್ಬಂದಿಯನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

Leave a Reply

ಹೊಸ ಪೋಸ್ಟ್‌