Hospital CM: ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ವಿಜಯಪುರ: ನಗರದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ಬಳಿ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ನಿರ್ಮಿಸಿರುವ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುಣ್ಯಭೂಮಿ ವಿಜಯಪುರಕ್ಕೆ ಪ್ರತಿ ಭಾರಿ ಭೇಟಿ ನೀಡಿದಾಗಲೂ ಈ ನೆಲದ ಸ್ಪರ್ಶದಿಂದಾಗಿ ನಾಡಿನಲ್ಲಿ ಹಲವಾರು ಕೆಲಸ ಮಾಡುವ ಸ್ಫೂರ್ತಿದಾಯಕ ಜ್ಞಾನ ಪಡೆದಿದ್ದೇನೆ ಎಂದು ತಿಳಿಸಿದರು. ವಿಜಯಪುರ ಜಿಲ್ಲೆಯ ಸಿದ್ದೇಶ್ವರ ಶ್ರೀಗಳ ಆಶೀರ್ವಾದದ ಬಲದೊಂದಿಗೆ ಈ […]

Yatnal CM: ವಿಜಯಪುರದ ಹುಲಿಯಂತಿರುವ ಯತ್ನಾಳ ಉತ್ತರ ಕರ್ನಾಟಕದ ಧ್ವನಿಯಾಗಿದ್ದಾರೆ- ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉತ್ತರ ಕರ್ನಾಟಕದ ಧ್ವನಿಯಾಗಿದ್ದಾರೆ.  ಕ್ರಿಯಾಶೀಲ ರಾಜಕಾರಣಿಯಾಗಿದ್ದಾರೆ.  ಉತ್ತರ ಕರ್ನಾಟಕ ಭಾಗದ, ವಿಜಯಪುರ ಜಿಲ್ಲೆಯ ಹುಲಿಯಂತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಸಕ ಗುಣಗಾನ ಮಾಡಿದ್ದಾರೆ. ವಿಜಯಪುರ ನಗರದ ಎನ್‌ಎಚ್-50 ಬಳಿ ಎಸ್- ಹೈಪರ್ ಮಾರ್ಟ ಹತ್ತಿರದ ಶ್ರೀ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಷಾಲಿಸಿ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತದಿಂದ ನಡೆದ ನಾನಾ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಶ್ರೀ ಜ್ಞಾನಯೋಗಿ ಶ್ರೀ […]

Road CM: ಗುಮ್ಮಟ ನಗರಿಯಲ್ಲಿ ಸುಭಾಷ್ ಚಂದ್ರ ಭೋಸ್ ರಸ್ತೆ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಸುಭಾಷ್ ಚಂದ್ರ ಭೋಸ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಶಾಸಕ ಬಸನಗೌಡ ಪಾಟೀಲ ಆಸ್ಥೆಯಿಂದ ನಿರ್ಮಿಸಿರುವ ಈ ರಸ್ತೆಯನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಲಾಗಿದ್ದು, ಈ ಸುಸಜ್ಜಿತ ರಸ್ತೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಗಣಿ ಮತ್ತು ಕಲ್ಲಿದ್ಸಲು ಸಚಿವ ಪ್ರಲ್ಹಾದ್ ಜೋಷಿ, ಸಚಿವರಾದ ಸಿ. ಸಿ. ಪಾಟೀಲ, ಗೋವಿಂದ ಕಾರಜೋಳ, ಆನಂದ ಸಿಂಗ್, ವಿಜಯಪುರ ನಗರ ಶಾಸಕ […]

Hockey CM: ವಿಜಯಪುರ ಸೈನಿಕ ಶಾಲೆಯಲ್ಲಿ ಆ್ಯಸ್ಚ್ರೋಟರ್ಫ್ ಟರ್ಫ್ ಹಾಕಿ ಮೈದಾನ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ನಗರದಲ್ಲಿರುವ ರಾಜ್ಯದ ಮೊದಲ ಸೈನಿಕ ಶಾಲೆಯಲ್ಲಿ ನಿರ್ಮಿಸಲಾಗಿರುವ ಆ್ಯಸ್ಟ್ರೋಟರ್ಫ್ ಹಾಕಿ ಮೈದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಕಿ ಆಡುವ ಮೂಲಕ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ಸೈನಿಕ ಶಾಲೆ ಭಾರತದಲ್ಲಿಯೇ ಉತ್ಕೃಷ್ಟ ಶಾಲೆಯಾಗಿದೆ.  ದೇಶದಲ್ಲಿ ಒಳ್ಳೆಯ ಹೆಸರನ್ನು ಪಡೆದಿದೆ.  ಇಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅದೃಷ್ಟವಂತರು.  ಇಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು.  ಭವಿಷ್ಯದಲ್ಲಿ ಉನ್ನತ ಅಧಿಕಾರಿಗಳಾಗಿ, ಎನ್ ಡಿ ಎ ದಲ್ಲಿ ಅವಕಾಶ ಪಡೆಯುವುದರ […]

CM Logo: ವಿಜಯಪುರದಲ್ಲಿ ನಡೆಯಲಿರುವ 37ನೇ ಕಾರ್ಯನಿರತರ ಪತ್ರಕರ್ತರ ಸಂಘದ ಸಮ್ಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ವಿಜಯಪುರದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ಸಮ್ಮೇಳನದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು. ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದ ವೇದಿಕೆಯಲ್ಲಿಯೇ ಲೋಗೋವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವಿಜಯಪುರ ಕಾನಿಪ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾನಿಕ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಅವಿನಾಶ ಬಿದರಿ ಮುಂತಾದವರು […]

Alamatti CM: ಸುಪ್ರೀಂ‌ ಕೋರ್ಟಿ ತೀರ್ಪಿನ ಬಳಿಕ ಆಲಮಟ್ಟಿ ಜಲಾಷಯ ಎತ್ತರ ಹೆಚ್ಚಳಕ್ಕೆ ಕ್ರಮ- ಸಿಎಂ‌ ಬಸವರಾಜ ಬೊಮ್ಮಾಯಿ

ವಿಜಯಪುರ: ಆಲಮಟ್ಟಿ ಜಲಾಷಯ ಎತ್ತರ ಕುರಿತು ಸುಪ್ರೀಂ‌ ಕೋರ್ಟಿನಲ್ಲಿ ತೀರ್ಪು ಬಾಕಿಯಿದ್ದು, ಅಂತಿಮ ಅಧಿಸೂಚನೆ ಬಂದ ನಂತರ ಎತ್ತರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ರಾಜ್ಯಸ ಪಾಲಿನ ನೀರನ್ನು ಸಂಗ್ರಹಿಸಿ ಉಪಯೋಗಿಸಲು ನಾನಾ ನೀರಾವರಿ ಯೋಜನೆಗಳನ್ನು ರೂಪಿಸಲಾಗಿದೆ. ಇನ್ನು ಹಲವಾರು ಯೋಜನೆಗಳು ಪ್ರಗತಿಯಲ್ಲಿವೆ. ಜಲಾಶಯ ಎತ್ತರದ […]

Earthquake Again: ಬಸವ ನಾಡಿನಲ್ಲಿ ಒಂದೇ ರಾತ್ರಿ ಮೂರು ಬಾರಿ ಭೂಕಂಪನ- ಎಲ್ಲಿ ಗೊತ್ತಾ?

ವಿಜಯಪುರ: ಕಳೆದ ಕೆಲವು ದಿನಗಳಿಂದ ನೆಮ್ಮದಿಯಿಂದಿದ್ದ ಬಸವ ನಾಡಿನ‌ ಜನ ಈಗ ಭೂಕಂಪನದಿಂದಾಗಿ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಿಂದ ಸುಮಾರು‌ 2.50 ಕಿ. ಮೀ. ದೂರದಲ್ಲಿ ವಾಯುವ್ಯ ಭಾಗದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ನಸುಕಿನ ಜಾವ 3.45ಕ್ಕೆ ರಿಕ್ಚರ್ ಮಾಪಕದಲ್ಲಿ1.9 ತೀವ್ರತೆ, ಬೆ. 3.46ಕ್ಕೆ 2 ತೀವ್ರತೆ ಮತ್ತು ಬೆ. 5.56ಕ್ಕೆ 3.2 ತೀವ್ರತೆಯ ಭೂಕಂಪನ ಉಂಟಾಗಿದೆ. ಭೂಮಿಯ ಕೆಳಗಡೆ 10 ಕಿ. ಮೀ.‌ ಆಳದಲ್ಲಿ‌ ಈ ಭೂಕಂಪನ ಉಂಟಾಗಿದೆ […]

CM Alamatti Bagin: ಆಲಮಟ್ಡಿ ಜಲಾಷಯಕ್ಕೆ ಸಿಎಂ‌ ಬಸವರಾಜ ಬೊಮ್ಮಾಯಿ ಗಂಗಾಪೂಜೆ, ಬಾಗೀನ ಸಲ್ಲಿಕೆ

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರು ಜಲಾಷಯಕ್ಕೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ. ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಅವರು ಆಲಮಟ್ಟಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ತೆರಳಿ ಕೃಷ್ಣಾ ನದಿಗೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.   ಈ ಸಂದರ್ಭದಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಮುದ್ದೇಬಿಹಾಳ ಶಾಸಕ ನಡಹಳ್ಳಿ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ […]

Lokayukta Raid: ಬೆಳ್ಳಂಬೆಳಿಗ್ಗೆ ಧೂಳಖೇಡ್ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಧಾಳಿ

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಯಲ್ಲಿರುವ ಚಡಚಣ ತಾಲೂಕಿನ ಧೂಳಖೇಡ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತರು ಧಾಳಿ ನಡೆಸಿದ್ದಾರೆ. ಸಾರಿಗೆ ವಾಹನ ಸವಾರರಿಂದ ಹಣ ವಸೂಲಿಗೆ ಈ ಚೆಕ್ ಪೋಸ್ಟ್ ನಲ್ಲಿ ಲಂಚ ಪಡೆಯಲಾಗುತ್ತದೆ ಎಂಬ ಆರೋಪ ಮುಂಚೆಯಿಂದಲೂ ಇದೆ.  ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 5 ಗಂಟೆಗೆ ಧಾಳಿ ನಡೆಸಿರುವ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ ನೇತೃವದ ಸುಮಾರು 20 ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಆರ್ ಟಿ ಓ ಚೆಕ್ […]