ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಸುಭಾಷ್ ಚಂದ್ರ ಭೋಸ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಶಾಸಕ ಬಸನಗೌಡ ಪಾಟೀಲ ಆಸ್ಥೆಯಿಂದ ನಿರ್ಮಿಸಿರುವ ಈ ರಸ್ತೆಯನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಲಾಗಿದ್ದು, ಈ ಸುಸಜ್ಜಿತ ರಸ್ತೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಗಣಿ ಮತ್ತು ಕಲ್ಲಿದ್ಸಲು ಸಚಿವ ಪ್ರಲ್ಹಾದ್ ಜೋಷಿ, ಸಚಿವರಾದ ಸಿ. ಸಿ. ಪಾಟೀಲ, ಗೋವಿಂದ ಕಾರಜೋಳ, ಆನಂದ ಸಿಂಗ್, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಿಂದಗಿ ಶಾಸಕ ರಮೇಶ ಭೂಸನೂರ, ಬಿಜೆಪಿ ಮುಖಂಡರಾದ ರಾಜು ಬಿರಾದಾರ, ರಾಹುಲ ಜಾಧವ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಹಾಗೂ ಅಧಿಕಾರಿಗಳು ಹಾಜರಿದ್ದರು.