CM Logo: ವಿಜಯಪುರದಲ್ಲಿ ನಡೆಯಲಿರುವ 37ನೇ ಕಾರ್ಯನಿರತರ ಪತ್ರಕರ್ತರ ಸಂಘದ ಸಮ್ಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ವಿಜಯಪುರದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ಸಮ್ಮೇಳನದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.

ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದ ವೇದಿಕೆಯಲ್ಲಿಯೇ ಲೋಗೋವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ವಿಜಯಪುರ ಕಾನಿಪ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾನಿಕ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಅವಿನಾಶ ಬಿದರಿ ಮುಂತಾದವರು ಉಪಸ್ಥಿತರಿರು.

Leave a Reply

ಹೊಸ ಪೋಸ್ಟ್‌